ಕೋವಿಡ್ -19: ಡೆಲ್ಟಾ ಪ್ರಕರಣಗಳಲ್ಲಿ ವಿಜಯಪುರ ಎರಡನೇ ಸ್ಥಾನದಲ್ಲಿ!
ವಿಜಯಪುರ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ 94 ಡೆಲ್ಟಾ ರೂಪಾಂತರ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನ ನಂತರ ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ಪ್ರಕರಣಗಳು ದಾಖಲಾದ ಜಿಲ್ಲೆ ಇದಾಗಿದೆ.

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ 94 ಡೆಲ್ಟಾ ರೂಪಾಂತರ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನ ನಂತರ ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ಪ್ರಕರಣಗಳು ದಾಖಲಾದ ಜಿಲ್ಲೆ ಇದಾಗಿದೆ.
ಜಿಲ್ಲಾಡಳಿತದ ಪ್ರಕಾರ, ಒಟ್ಟು 187 ಮಾದರಿಗಳನ್ನು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ವಿಜ್ಞಾನ ಸಂಸ್ಥೆಗೆ (NIHMANS) ಕಳುಹಿಸಲಾಗಿದೆ. ಅವುಗಳಲ್ಲಿ 94 ಡೆಲ್ಟಾ ತಳಿ ಪ್ರಕರಣಗಳು ದೃಢಪಟ್ಟಿದ್ದು, 65 ಮಾದರಿಗಳ ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ ಎಂದು ತಿಳಿದು ಬಂದಿದೆ.
ಕೋವಿಡ್ ಎರಡು ಲಸಿಕೆ ಪಡೆದ ನಂತರ ಕೊರೋನಾ ಸೋಂಕು ಬಂದವರ, 15 ವರ್ಷ ಒಳಗಿನವರ ಮಾದರಿಯನ್ನು ನಾವು ಪರೀಕ್ಷೆಗೆ ಕಳುಹಿಸಿದ್ದೇವೆ, ಮೇ ಮತ್ತು ಜೂನ್ ತಿಂಗಳಿನಲ್ಲಿ ನಾವು ಮಾದರಿಯನ್ನು ಕಳುಹಿಸಿದ್ದೆವು. ಜುಲೈ ಮೂರನೇ ವಾರದಲ್ಲಿ ಫಲಿತಾಂಶ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜ್ ಕುಮಾರ್ ಯಾರಗಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


