ಸಾರ್ವಜನಿಕ ಸ್ಥಳಗಳಲ್ಲಿ ಗೇಲಿ ಮಾಡುವವರು, ಡ್ರಗ್ ಪೂರೈಕೆದಾರರ-ಬಳಕೆದಾರರ ವಿರುದ್ಧ ಕಠಿಣ ಕ್ರಮ: ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ
ಮಹಿಳೆಯರು, ಹೆಣ್ಣು ಮಕ್ಕಳ ವಿರುದ್ಧ ಗೇಲಿ ಮಾಡುವುದು, ಡ್ರಗ್ ಪೆಡ್ಲರ್ ಗಳು ಮತ್ತು ಪೋಲಿಯಾಟಗಳನ್ನು ಆಡಿದರೆ ಜೋಕೆ, ಪೊಲೀಸರು ತಕ್ಕ ಶಾಸ್ತಿ ನೀಡಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಮಹಿಳೆಯರು, ಹೆಣ್ಣು ಮಕ್ಕಳ ವಿರುದ್ಧ ಗೇಲಿ ಮಾಡುವುದು, ಡ್ರಗ್ ಪೆಡ್ಲರ್ ಗಳು ಮತ್ತು ಪೋಲಿಯಾಟಗಳನ್ನು ಆಡಿದರೆ ಜೋಕೆ, ಪೊಲೀಸರು ತಕ್ಕ ಶಾಸ್ತಿ ನೀಡಲಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.
ನಿನ್ನೆ ಬೆಂಗಳೂರಿನ ನಂದಿನಿ ಲೇ ಔಟ್ ನಲ್ಲಿ ಮಾಸಿಕ ಜನಸಂಪರ್ಕ ದಿವಸದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಅವರು, ಪುಂಡು ಪೋಕರಿಗಳು ಸಾರ್ವಜನಿಕ ಸ್ಥಳಗಳಲ್ಲಿ ನಿಂತು ಸಿಗರೇಟು ಸೇದುವುದು, ಪೋಲಿ ಮಾತುಗಳನ್ನಾಡಿ ಗೇಲಿ ಮಾಡುವುದು ಇತ್ಯಾದಿಗಳನ್ನು ಮಾಡುತ್ತಾರೆ, ಇದರಿಂದ ಯುವತಿಯರು, ಹೆಣ್ಣು ಮಕ್ಕಳಿಗೆ ಓಡಾಡುವುದು ಕಷ್ಟವಾಗುತ್ತದೆ ಎಂದರು. ಅದಕ್ಕೆ ಉತ್ತರಿಸಿದ ಕಮಲ್ ಪಂತ್, ಇಂತಹ ವರ್ತನೆಗಳನ್ನು ಸಹಿಸಲು ಸಾಧ್ಯವಿಲ್ಲ, ಇಂತವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಮತ್ತೊಬ್ಬ ನಾಗರಿಕರು ತಮ್ಮ ಪ್ರದೇಶದಲ್ಲಿ ಗಾಂಜಾ ಸೇವನೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ದೂರು ನೀಡಿದರು. ಇದಕ್ಕೆ ಪೊಲೀಸ್ ಆಯುಕ್ತರು, ನಗರ ಪೊಲೀಸರು ಡ್ರಗ್ ಪೆಡ್ಲಿಂಗ್ ಮತ್ತು ಪೆಡ್ಲರ್ ಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಮಾದಕ ವಸ್ತುಗಳ ಮಾರಾಟ ಮಾತ್ರವಲ್ಲದೆ ಅವುಗಳ ಸೇವನೆ ಕೂಡ ಅಪರಾಧವಾಗಿದೆ, ಅಂತವರ ವಿರುದ್ಧ ಎನ್ ಡಿಪಿಎಸ್ ಕಾಯ್ದೆಯಡಿ ಕೇಸು ದಾಖಲಿಸಲಾಗುವುದು. ಡ್ರಗ್ ಮಾರಾಟ ಮಾಡುವ ಸಂಶಯಾಸ್ಪದ ಸ್ಥಳಗಳಲ್ಲಿ ಪೊಲೀಸರ ಗಸ್ತು ತಿರುಗುವಿಕೆ ಹೆಚ್ಚಾಗಲಿದ್ದು ಅಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರ ವಿರುದ್ಧ ಕೇಸು ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಸತಿ ಪ್ರದೇಶಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಜನರ ಮತ್ತು ವಾಹನಗಳ ಓಡಾಟಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ ಆಯುಕ್ತರು, ಮುಂದಿನ ದಿನಗಳಲ್ಲಿ ವಸತಿ ಪ್ರದೇಶಗಳಲ್ಲಿ ಬೇಜವಾಬ್ದಾರಿಯಾಗಿ ವಾಹನಗಳನ್ನು ಪಾರ್ಕ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


