ರಾಜ್ಯದಲ್ಲಿ ಇನ್ನೂ 5 ದಿನ ಮಳೆ: ಹವಾಮಾನ ಇಲಾಖೆ ಮಾಹಿತಿ
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮತ್ತು ನಾಳೆ (ಜು.25 ಮತ್ತು 26)ರಂದು ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 4-5 ದಿನಗಳಲ್ಲಿ ರಾಜ್ಯದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಮಳೆರಾಯ ಕೊಂಚ ವಿರಾಮ ಕೊಡಲಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಮುಂದಿನ 24 ಗಂಟೆ ಅರಬ್ಬೀ ಸಮುದ್ರದಲ್ಲಿ 3.7 ಮೀಟರ್ ಎತ್ತರದ ಅಲೆಗಳು ದಡಕ್ಕೆ ಅಪ್ಪಲಿಸಲಿವೆ. ಗಾಳಿ ತೀವ್ರತೆ ಕೂಡ ಹೆಚ್ಚಾಗಿರಲಿದ್ದು, ಗಂಟೆಗೆ 40-520 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದ್ದಾರೆ.
ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿರುವ ಪ್ರಕಾರ, ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾದಾಗಿನಿಂದ 501.6 ಮಿ.ಮೀ ಮಳೆ ಸುರಿದಿದೆ ಎಂದು ತಿಳಿದುಬಂದಿದೆ.
ಪ್ರತೀ ವರ್ಷ ಸಾಮಾನ್ಯವಾಗಿ 403.8 ಮಿ.ಮೀ ಮಳೆಯಾಗುತ್ತಿತ್ತು. ಈ ಬಾರಿ ಹೆಚ್ಚುವರಿ ಶೇ.24ರಷ್ಟು ಮಳೆಯಾಗಿದೆ. ಬೆಂಗಳೂರಿನಲ್ಲಿ ಶನಿವಾರ ರಾತ್ರಿ 8.30ರವರೆಗೆ 24.4 ಮಿ.ಮೀ. ಮಳೆ ದಾಖಲಾಗಿದೆ. ಹೆಚ್ಎಎಲ್ ಏರ್ಪೋರ್ಟ್ ಒಂದರಲ್ಲೇ 16.6 ಮಿ.ಮೀ ಮಳೆ ಸುರಿದಿದೆ ಎಂದು ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


