ರಾಜ್ಯ

ರಾಜ್ಯ ಸರ್ಕಾರದಿಂದ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಸದಸ್ಯರ ನೇಮಕ

ರಾಜ್ಯ ಸರ್ಕಾರ ಸೋಮವಾರ ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಸದಾಶಿವ ಶೆಣೈ ಅವರನ್ನು ನೇಮಕ ಮಾಡಿದೆ.

ರಾಜ್ಯ ಸರ್ಕಾರದಿಂದ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಸದಸ್ಯರ ನೇಮಕ
ವಿಧಾನಸೌಧ
Published On :

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಕರ್ನಾಟಕ ಮಾಧ್ಯಮ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಸದಾಶಿವ ಶೆಣೈ ಅವರನ್ನು ನೇಮಕ ಮಾಡಿದೆ. 

ಬೆಂಗಳೂರಿನ ಕೆ.ಸದಾಶಿವ ಶೆಣೈ ಅಕಾಡೆಮಿಯ ನೂತನ ಅಧ್ಯಕ್ಷರಾಗಿದ್ದು, ಶಿವಮೊಗ್ಗದ ಕನ್ನಡಪ್ರಭ ದಿನಪತ್ರಿಕೆ ಪ್ರಧಾನ ವರದಿಗಾರ ಗೋಪಾಲ ಸಿಂಗಪ್ಪಯ್ಯ ಯಡಗೆರೆ, ಕೆ.ಕೆ.ಮೂರ್ತಿ, ವಿಶ್ವವಾಣಿ ದಿನ ಪತ್ರಿಕೆಯ ಹಿರಿಯ ವರದಿಗಾರ ಶಿವಕುಮಾರ ಬೆಳ್ಳಿತಟ್ಟೆ, ಗುರುರಾಜ ಕೂಡ್ಲಿ, ವಿಜಯವಾಣಿ ಪತ್ರಿಕೆ ಹಿರಿಯ ವರದಿಗಾರರು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷ ಸಿ.ಕೆ.ಮಹೇಂದರ್, ಜಯಕಿರಣ ದೈನಿಕ ಬಿಜೆ ಹಿರಿಯ ವರದಿಗಾರರು ಜಗನ್ನಾಥ ಬಾಳ, ಕಲುರ್ಗಿಯ ಬುದ್ಧಲೋಕ ಸಂಪಾದಕರು ದೇವೇಂದ್ರಪ್ಪ ಕಪನೂರು, ಶಿವಮೊಗ್ಗ ನಮ್ಮ ನಾಡು ಕೆ.ವಿ.ಶಿವಕುಮಾರ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.