ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ತಾಯಿ, ಮಗ ಸಾವು!
ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ತಾಯಿ, ಮಗ ಸಾವನ್ನಪ್ಪಿದ ಘಟನೆ ನಗರದ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ತಾಯಿ, ಮಗ ಸಾವನ್ನಪ್ಪಿದ ಘಟನೆ ನಗರದ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಭದ್ರಪ್ಪ ಲೇಔಟ್ನಲ್ಲಿ ಈ ಅಪಘಾತ ಸಂಭವಿಸಿದ್ದು, ಬಿಡದಿ ಮೂಲದ 50 ವರ್ಷ ವಯಸ್ಸಿನ ಮಂಗಳಾ ಹಾಗೂ 30 ವರ್ಷದ ಹರೀಶ್ ಮೃತಪಟ್ಟಿದ್ದಾರೆ.
ಇಬ್ಬರೂ ಸಮೀಪದ ಸಂಜಯನಗರದ ದೊಡ್ಡ ಬೈಲದಕೆರೆ ನಿವಾಸಿಗಳು ಎಂದು ತಿಳಿದುಬಂದಿದ್ದು, ಮೃತರು ತಳ್ಳುವಗಾಡಿಯಲ್ಲಿ ಫ್ಯಾನ್ಸಿ ವಸ್ತುಗಳ ಮಾರಾಟ ಮಾಡುತ್ತಿದ್ದರು. ಮೃತ ಹರೀಶ್ ಅಂಗವಿಕಲರಾಗಿದ್ದು, ವ್ಯಾಪಾರ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ರೈಲ್ವೇ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದ್ದು, ರೈಲು ಬರುವುದು ಗಮನಿಸದೆ ಟ್ರಾಕ್ ದಾಟಿರುವುದರಿಂದ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ರೈಲು ಹಳಿ ದಾಟುತ್ತಿದ್ದಾಗ ಹಿಂದಿನಿಂದ ಬಂದ ರೈಲು ಅವರಿಗೆ ಅಪ್ಪಳಿಸಿದೆ. ರೈಲು ಆಗಮನದ ಬಗ್ಗೆ ರೈಲಿನ ಲೋಕೋ ಪೈಲಟ್ ಹಾರ್ನ್ ಮಾಡಿದರೂ ಹಳಿಯಲ್ಲಿದ್ದ ಅವರು ಸಾಗುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಸದ್ಯ ಎರಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೋರಿಂಗ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


