ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿಗೆ ವಾಪಸ್!
ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಬೆಂಗಳೂರಿಗೆ ವಾಪಸ್ಸಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಬೆಂಗಳೂರಿಗೆ ವಾಪಸ್ಸಾಗಿದ್ದಾರೆಂದು ತಿಳಿದುಬಂದಿದೆ.
ಜುಲೈ.19ರಂದು ದೆಹಲಿಗೆ ಭೇಟಿ ನೀಡಿದ್ದ ರಾಜ್ಯಪಾಲರು ಅಂದಿನಿಂದಲೂ ಪ್ರವಾಸದಲ್ಲಿಯೇ ಇದ್ದರು. ಈ ಸಂದರ್ಭದಪಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ದೆಹಲಿ ಭೇಟಿ ಬಳಿಕ ತವರು ರಾಜ್ಯ ಭೋಪಾಲ್'ಗೂ ಭೇಟಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಸಂಚಲನ ಮೂಡಿಸಿದ್ದು, ಈ ನಡುವಲ್ಲೇ ರಾಜ್ಯಪಾಲರ ಪ್ರವಾಸ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ದಾರಿಮಾಡಿಕೊಟ್ಟಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದೇ ಆದರೆ, ರಾಜ್ಯಪಾಲರಿಗೆ ರಾಜೀನಾಮೆ ನೀಡಬೇಕಾಗುತ್ತದೆ. ಹೀಗಾಗಿ ರಾಜ್ಯಪಾಲರು ನಗರದಲ್ಲಿರುವುದು ಅಗತ್ಯವಾಗಿತ್ತು.
ಈ ನಡುವೆ ರಾಜ್ಯದ ಬಿಜೆಪಿ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪಾಲ್ಗೊಳ್ಳುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


