ಅಧಿಕಾರದ ಕೊನೆ ದಿನ ಸರ್ಕಾರಿ ನೌಕರರಿಗೆ ಬಿಎಸ್ ವೈ ಬಂಪರ್ ಕೊಡುಗೆ: ಶೇ.21.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ
ನಿನ್ನೆ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಧಿಕಾರದ ಕೊನೆಯ ದಿನ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್ ನೀಡಿದ್ದು, ಶೇ.21.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದಾರೆ.

ಬೆಂಗಳೂರು: ನಿನ್ನೆ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಧಿಕಾರದ ಕೊನೆಯ ದಿನ ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್ ನೀಡಿದ್ದು, ಶೇ.21.5ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದಾರೆ.
ರಾಜಿನಾಮೆಗೂ ಮುನ್ನ ತಮ್ಮ ಕೊನೆಯ ಹಂತದ ಕರ್ತವ್ಯಗಳನ್ನು ನಿರ್ವಹಿಸಿದ ಬಿಎಸ್ ಯಡಿಯೂರಪ್ಪ ಅವರು ಸರ್ಕಾರಿ ನೌಕರರ ತುಟ್ಟಿಭತ್ಯೆ ಬಿಡುಗಡೆಗೆ ಆದೇಶ ಹೊರಡಿಸಿದ್ದಾರೆ.
ಮೂಲಗಳ ಪ್ರಕಾರ 2020 ರ ಜನವರಿ 1 ರಿಂದ 2021 ರ ಜೂನ್ 30ರ ಅವಧಿಯ ಹೆಚ್ಚುವರಿ ತುಟ್ಟಿಭತ್ಯೆ ಕಂತು ಬಿಡುಗಡೆ ಮಾಡಲು ಸೂಚಿಸಿದ್ದು, 2021 ರ ಜುಲೈ ಒಂದರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿ ಗಳಲ್ಲಿ ನೀಡಲಾಗುವ ತುಟ್ಟಿಭತ್ಯೆ ದರಗಳನ್ನು ಶೇಕಡ 11.25 ರಿಂದ 21.50 ಕ್ಕೆ ಪರಿಷ್ಕರಿಸಲಾಗಿದೆ.
ರಾಜ್ಯ ಸರ್ಕಾರದ ನಿವೃತ್ತ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ, ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ತುಟ್ಟಿಭತ್ಯೆ ಷರಿಷ್ಕರಣೆ ದರಗಳು ಜಾರಿಯಾಗಿವೆ.
ಅವರಿಗೂ ಜುಲೈ 1ರಿಂದ ತುಟ್ಟಿಭತ್ಯೆ ಪರಿಷ್ಕøತ ದರಗಳು ಜಾರಿಗೆ ಬರಲಿದ್ದು, ಶೇ.11.25ರಿಂದ ಶೇ.21.50ಗೆ ಏರಿಕೆ ಮಾಡಲಾಗಿದೆ. ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿದ್ದ ನಿವೃತ್ತ ನೌಕರರಿಗೂ ಈ ಆದೇಶ ಅನ್ವಯಿಸಲಿದೆ. ಜಿಲ್ಲಾ ಪಂಚಾಯ್ತಿಗಳ ಪೂರ್ಣಾವಧಿ ನೌಕರರಿಗೆ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‍ಚಾರ್ಜ್ ನೌಕರರಿಗೆ ಸರ್ಕಾರದಿಂದ ಸಹಾಯಾನುಧಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ತುಟ್ಟಿಭತ್ಯೆ ಆದೇಶ ಅನ್ವಯವಾಗಲಿದೆ.
ಯುಜಿಸಿ, ಎಐಸಿಟಿಇ, ಐಸಿಎಆರ್, ಎನ್‍ಜೆಪಿಎಸ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‍ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಆರ್ಥಿಕ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


