ರಾಜ್ಯ

ವಿಷಾಹಾರ ತಿಂದ 60ಕ್ಕೂ ಹೆಚ್ಚು ಮಂಗಗಳು ಅಸ್ವಸ್ಥ; ಪ್ಲಾಸ್ಟಿಕ್ ಬ್ಯಾಗ್ ಗಳಲ್ಲಿ ಹಾಕಿ ರಸ್ತೆ ಬದಿ ಎಸೆದ ದುಷ್ಕರ್ಮಿಗಳು!

ವಿಷಾಹಾರ ಸೇವಿಸಿದ ಸುಮಾರು 60ಕ್ಕೂ ಹೆಚ್ಚು ಮಂಗಗಳನ್ನು ಪ್ಲಾಸ್ಟಿಕ್ ಬ್ಯಾಹಗ್ ನಲ್ಲಿ ಹಾಕಿ ರಸ್ತೆ ಬದಿ ಎಸೆದಿರುವ ಘಟನೆ ಹಾಸನದಲ್ಲಿ ನಡೆದಿದೆ.

ವಿಷಾಹಾರ ತಿಂದ 60ಕ್ಕೂ ಹೆಚ್ಚು ಮಂಗಗಳು ಅಸ್ವಸ್ಥ; ಪ್ಲಾಸ್ಟಿಕ್ ಬ್ಯಾಗ್ ಗಳಲ್ಲಿ ಹಾಕಿ ರಸ್ತೆ ಬದಿ ಎಸೆದ ದುಷ್ಕರ್ಮಿಗಳು!
ಅಸ್ವಸ್ಥಗೊಂಡ ಮಂಗಗಳು
Published On :

ಹಾಸನ: ವಿಷಾಹಾರ ಸೇವಿಸಿದ ಸುಮಾರು 60ಕ್ಕೂ ಹೆಚ್ಚು ಮಂಗಗಳನ್ನು ಪ್ಲಾಸ್ಟಿಕ್ ಬ್ಯಾಹಗ್ ನಲ್ಲಿ ಹಾಕಿ ರಸ್ತೆ ಬದಿ ಎಸೆದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಸಕಲೇಶಪುರದ ಬೇಗೂರು ಕ್ರಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸುಮಾರು 60ಕ್ಕೂ ಹೆಚ್ಚು ಚೀಲಗಳಲ್ಲಿ ಮಂಗಗಳನ್ನು ಹಾಕಿ ರಸ್ತೆ ಬದಿಗೆ ಎಸೆಯಲಾಗಿದೆ. ದಾರಿಹೋಕರು ಇದನ್ನು ನೋಡಿ ಚೀಲಗಳನ್ನು ಬಿಚ್ಚಿದ್ದು ಈ ವೇಳೆ ಮಂಗಗಳಿಗೆ ವಿಷಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ  ಕಾರ್ಯಪ್ರವೃತ್ತರಾದ ಸ್ಥಳೀಯರು ಮಂಗಗಳನ್ನು ರಕ್ಷಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಆದರೆ 60 ಮಂಗಗಳ ಪೈಕಿ ಕೇವಲ 14 ಮಂಗಗಳನ್ನು ಮಾತ್ರ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಂತೆಯೇ ಮೃತ ಮಂಗಗಳ ಅಂತ್ಯಸಂಸ್ಕಾರಕ್ಕೂ ಸಿದ್ಧತೆ ನಡೆಸಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.