ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗಿಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ
ಪ್ರವಾಹ ಪೀಡಿತ ಉತ್ತರ ನ್ನಡ ಜಿಲ್ಲೆಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಭೇಟಿ ನೀಡಿ, ಪರಿಹಾರ ಕಾರ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ.

ಬೆಂಗಳೂರು: ಪ್ರವಾಹ ಪೀಡಿತ ಉತ್ತರ ನ್ನಡ ಜಿಲ್ಲೆಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಭೇಟಿ ನೀಡಿ, ಪರಿಹಾರ ಕಾರ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ.
ಜು.29ರಂದು ಬೆಳಗ್ಗೆ 9.30ಕ್ಕೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳಿಗೆ ತೆರಳಲಿರುವ ಮುಖ್ಯಮಂತ್ರಿ, ಅಲ್ಲಿಂದ ರಸ್ತೆ ಮೂಲಕ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಾರವಾರ ಮತ್ತು ಅಂಕೋಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕ್ರಮಗಳ ಪರಿಶೀಲನೆ ಮತ್ತು ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ ಎರಡು ಗಂಟೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತಂತೆ ಶಾಸಕರು, ಸಂಸತ್ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅಂಕೋಲಾದಲ್ಲಿರುವ ನಾಡವರ ಸಭಾ ಭವನದಲ್ಲಿ ಚರ್ಚೆ ನಡೆಸಲಿದ್ದಾರೆ.
ಆನಂತರ, ರಸ್ತೆ ಮೂಲಕ ಅಂಕೋಲಾದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಆಗಮಿಸಿ, ವಿಶೇಷ ವಿಮಾನದ ಮೂಲಕ ಸಂಜೆ 7 ಗಂಟೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


