ಚಾಮರಾಜನಗರ: ಬಿಆರ್ ಟಿ ಹುಲಿ ರಕ್ಷಿತಾರಣ್ಯದಲ್ಲಿ ಐವರು ಕಳ್ಳ ಬೇಟೆಗಾರರ ಬಂಧನ
ಬಿಳಿಗಿರಿ ರಂಗನಾಥ ದೇವಾಲಯ ಹುಲಿ ರಕ್ಷಿತಾರಣ್ಯದಲ್ಲಿ ಗುರುವಾರ ಅರಣ್ಯ ಇಲಾಖೆ ಅಧಿಕಾರಿಗಳು ಐವರನ್ನು ಬಂಧಿಸಿ, ಬೇಟೆಗೆ ಬಳಿಸಿದ್ದ ಬಂದೂಕು ಮತ್ತು ಇತರ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಚಾಮರಾಜನಗರ: ಬಿಳಿಗಿರಿ ರಂಗನಾಥ ದೇವಾಲಯ ಹುಲಿ ರಕ್ಷಿತಾರಣ್ಯದಲ್ಲಿ ಗುರುವಾರ ಅರಣ್ಯ ಇಲಾಖೆ ಅಧಿಕಾರಿಗಳು ಐವರನ್ನು ಬಂಧಿಸಿ, ಬೇಟೆಗೆ ಬಳಿಸಿದ್ದ ಬಂದೂಕು ಮತ್ತು ಇತರ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಗೋವಿಂದರಾಜು(29) ಮತ್ತು ಬೆಂಗಳೂರಿನ ಮಲ್ಲೇಶ್ವರಂನ ಪ್ರಮೋದ್ (27) ಎಂದು ಗುರುತಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತರಲ್ಲಿ ಮೂವರು ಕೊಡಗು ಜಿಲ್ಲೆಯ ಸೋಮವಾರ ಪೇಟೆ ಮೂಲದವರಾಗಿದ್ದರೆ, ಒಬ್ಬರು ಚಾಮರಾಜನಗರ ತಾಲ್ಲೂಕಿನ ಬಡಗಲಪುರ ಮತ್ತು ಇಬ್ಬರು ಬೆಂಗಳೂರಿನ ಮಲ್ಲೇಶ್ವರಂ ಮೂಲದವರಾಗಿದ್ದಾರೆ.
ಬಂಧಿತರಿಂದ ಎರಡು ಬಂದೂಕುಗಳು(ಈ ಪೈಕಿ ಒಂದಕ್ಕೆ ಪರವಾನಿಗೆ ಇಲ್ಲ), ಆರು ಜೀವಂತ ಕಾರ್ಟಿಜ್ ಗಳು, ಒಂದು ಚಾಕು, ಬ್ಯಾಟರಿ ದೀಪಗಳು ಮತ್ತು ಇತರ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ವಡ್ಗಲಪುರ ಬಳಿಯ ಚಾಮರಾಜನಗರಕ್ಕೆ ತೆರಳುತ್ತಿದ್ದ ಕಾರನ್ನು ತಡೆದು ಈ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅರಣ್ಯ ಉಪ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


