ರಾಜ್ಯ

ನಾನು ಎಷ್ಟೇ ಮೇಲೆ ಹೋದರೂ ನಿಮ್ಮ ಬಸವರಾಜನೇ: ಮುಖ್ಯಮಂತ್ರಿ ಬೊಮ್ಮಾಯಿ ಮಾತು ಕೇಳಿ ಪುಳಕಿತರಾದ ಅಭಿಮಾನಿಗಳು

ನಾನು ಎಷ್ಟೇ ಮೇಲೆ ಹೋದರೂ ನಾನು ನಿಮ್ಮ ಬಸಣ್ಣನೇ’ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾತು ಕೇಳಿದ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಬಂದಿದ್ದ ಅವರ ಅಭಿಮಾನಿಗಳು ಪುಳಕಿತರಾದರು.

ನಾನು ಎಷ್ಟೇ ಮೇಲೆ ಹೋದರೂ ನಿಮ್ಮ ಬಸವರಾಜನೇ: ಮುಖ್ಯಮಂತ್ರಿ ಬೊಮ್ಮಾಯಿ ಮಾತು ಕೇಳಿ ಪುಳಕಿತರಾದ ಅಭಿಮಾನಿಗಳು
ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ‘ನಾನು ಎಷ್ಟೇ ಮೇಲೆ ಹೋದರೂ ನಾನು ನಿಮ್ಮ ಬಸಣ್ಣನೇ’ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾತು ಕೇಳಿದ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಬಂದಿದ್ದ ಅವರ ಅಭಿಮಾನಿಗಳು ಪುಳಕಿತರಾದರು. 

ಮುಖ್ಯಮಂತ್ರಿಯಾಗಿ ಬೊಮ್ಮಾಯಿ ನೇಮಕಗೊಳ್ಳುತ್ತಿದ್ದಂತೆ ಅವರ ಸ್ವಕ್ಷೇತ್ರ ಶಿಗ್ಗಾವಿ ಮತ್ತು ಹಾವೇರಿ ಜಿಲ್ಲೆಯಿಂದ ಬಂದಿದ್ದ ಅಭಿಮಾನಿಗಳು ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬುಧವಾರ ಮಧ್ಯಾಹ್ನ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಿದ್ದರು. ಬೊಮ್ಮಾಯಿ ವೇದಿಕೆಗೆ ಬರುತ್ತಿದ್ದಂತೆ ‘ಹಾವೇರಿ ಹುಲಿ’ಗೆ ಜಯವಾಗಲಿ ಎಂದು ಹರ್ಷೋದ್ಗಾರ ಮಾಡಿದರು.

ಈ ವೇಳೆ ಮಾತನಾಡಿದ ಬೊಮ್ಮಾಯಿ ಅವರು, ‘ಶಿಗ್ಗಾವಿ ಕ್ಷೇತ್ರದ ಪ್ರತಿ ಹಳ್ಳಿಯ ಮನೆಗಳಲ್ಲಿ ನಾನಿದ್ದೇನೆ. ಸ್ಥಾನದ ಬಲಕ್ಕಿಂತ ಸೇವೆ ಮಾಡುವುದು ಬಹಳ ಮುಖ್ಯ. ನಮ್ಮ ಜಿಲ್ಲೆ ಮತ್ತು ಕ್ಷೇತ್ರದ ಜನತೆಗೆ ವಿಶೇಷ ವ್ಯವಸ್ಥೆ ಮಾಡುತ್ತೇನೆ. ಶಿಗ್ಗಾವಿಯನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇನೆ. ರಾಜ್ಯದ ಅಭಿವೃದ್ಧಿಯ ಜತೆಗೆ ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮಾಡುತ್ತೇನೆ’  ಎಂದು ಭರವಸೆ ನೀಡಿದರು.

‘ನನಗೆ ಶಕ್ತಿ ತುಂಬಿದವರು ನೀವು. ನಿಮ್ಮ ಬೆಂಬಲದಲ್ಲಿ ನನಗೆ ಎಷ್ಟು ಶಕ್ತಿ ಇದೆ ಎನ್ನುವುದೂ ನನಗೆ ಗೊತ್ತಿದೆ. ನನಗೆ ಹೆಗಲಿಗೆ ಹೆಗಲು ಕೊಟ್ಟಿದ್ದೀರಿ. ಹೆಜ್ಜೆಯಲ್ಲಿ ಹೆಜ್ಜೆಯಿಟ್ಟು ಸಾಧನೆ ಮಾಡಿದ್ದೀರಿ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವಲ್ಲಿ ಯಶಸ್ವಿಯಾಗಿದ್ದೇನೆ. ನಿಮ್ಮನ್ನು ಪಡೆದುಕೊಂಡಿರುವುದು ನನ್ನ ಪೂರ್ವಜನ್ಮದ ಪುಣ್ಯ. ನಿಮ್ಮನ್ನೆಲ್ಲ ನೋಡಿದಾಗ ಅತ್ಮವಿಶ್ವಾಸ ಹೆಚ್ಚಾಗುತ್ತದೆ. ಆದಮ್ಯ ಶಕ್ತಿ ಬರುತ್ತದೆ. ನಿಮ್ಮೀ ಶಕ್ತಿ- ಬೆಂಬಲದಿಂದ ಮುಂದೆ ಇಟ್ಟ ಹೆಜ್ಜೆಯನ್ನು ಯಾವತ್ತೂ ಹಿಂದೆ ಇಟ್ಟಿಲ್ಲ’ ಎಂದು ಹೇಳಿದರು. 

ನನಗೆ ಹಿರಿಯರಾದ ಉದಾಸಿಯವರು ನೆನಪಿಗೆ ಬರುತ್ತಿದ್ದಾರೆ. ಜಿಲ್ಲೆಯ ಅವರ ಸೇವೆ ಅಪಾರವಾಗಿದೆ. ಇವತ್ತು ಅವರು ನಮ್ಮ ನಡುವೆ ಇಲ್ಲ. ಎಲ್ಲೇ ಇದ್ದರೂ ಅವರ ಆಶೀರ್ವಾದ ನಮ್ಮ ಮೇಲೆ ಇರುತ್ತದೆ’ ಎಂದು ಬೊಮ್ಮಾಯಿಯವರು ಇದೇ ವೇಳೆ ಭಾವುಕರಾದರು.

‘ಎಲ್ಲ ವರ್ಗದ ಜನತೆಗೆ ನ್ಯಾಯ ಒದಗಿಸಲು ಬದ್ದನಾಗುತ್ತೇನೆ. ಸ್ವಲ್ಪ ತಾಳ್ಮೆಯೂ ಬೇಕು, ಸಹಕಾರವೂ ಬೇಕು. ನಿಮಗೋಸ್ಕರ ವಿಶೇಷ ಸಮಾರಂಭವನ್ನು ಏರ್ಪಡಿಸುತ್ತೇನೆ. ನಾನು ಎಷ್ಟೇ ಮೇಲೆ ಹೋದರೂ ನಾನು ನಿಮ್ಮ ಬಸಣ್ಣನೇ. ನೀವೂ ಕುಳಿತಿರಿ. ನಾನೇ ಅಲ್ಲಿ ಬರುತ್ತೇನೆ’ ಎಂದು ಹೇಳಿದ ಅವರು, ಜನರು ಕುಳಿತಲ್ಲಿಗೇ ಹೋಗಿ ಅಭಿನಂದನೆ ಸ್ವೀಕರಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.