ಸಿದ್ದರಾಮಯ್ಯ ಆರೋಗ್ಯದಲ್ಲಿ ಇದ್ದಕ್ಕಿದ್ದಂತ ಏರುಪೇರು: ಎರಡು ದಿನಗಳ ವಿಶ್ರಾಂತಿಗೆ ವೈದ್ಯರ ಸಲಹೆ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
ಪಕ್ಷದ ಮೂಲಗಳಂತೆ, ಜ್ವರದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಂದಿನ ಎರಡು ದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಸಿದ್ದರಾಮಯ್ಯ ಈ ಹಿಂದೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರೂ ಅವರಿಗೆ ನೆಗೆಟೀವ್ ವರದಿ ಬಂದಿತ್ತು.
ಸಿದ್ದರಾಮಯ್ಯ ಈಗಾಗಲೇ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ನಿನ್ನೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಂತರ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರು ಅವರಿಗೆ ಎರಡು ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


