ಯೋಗೇಶ್ ಗೌಡ ಹತ್ಯೆ ಪ್ರಕರಣ: ಎರಡನೇ ಬಾರಿಯೂ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ
ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಎರಡನೇ ಬಾರಿ ಹೈಕೋರ್ಟ್ ವಜಾಗೊಳಿಸಿದೆ.

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಎರಡನೇ ಬಾರಿ ಹೈಕೋರ್ಟ್ ವಜಾಗೊಳಿಸಿದೆ.
ಮೃತರ ಪತ್ನಿಗೆ ಹಣ ಹಾಗೂ ಕಾಂಗ್ರೆಸ್ ನಲ್ಲಿ ಹುದ್ದೆ ನೀಡುವ ಆಮೀಷ ಒಡ್ಡಿದ ವಿನಯ್ ಕುಲಕರ್ಣಿ ಪ್ರಕರಣದ ಸಾಕ್ಷ್ಯ ನಾಶ ಮಾಡಲು ಯತ್ನಿಸಿದ್ದಾರೆ ಎಂದು ಹೇಳಿ ಮುಖ್ಯ ನ್ಯಾಯಮೂರ್ತಿ ಕೆ. ನಟರಾಜನ್ ಎರಡನೇ ಬಾರಿಯೂ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ.
ವಿನಯ್ ಕುಲಕರ್ಣಿ ನಡವಳಿಕೆಯನ್ನು ಉಲ್ಲೇಖಿಸಿದ ನ್ಯಾಯಮೂರ್ತಿಗಳು, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ, ಸಾಕ್ಷಿಗಳನ್ನು ನಾಶ ಮಾಡುವುದು, ಪೊಲೀಸ್ ಅಧಿಕಾರಿಯ ಮೇಲೆ ಸುಳ್ಳು ಚಾರ್ಜ್‌ಶೀಟ್ ಸಲ್ಲಿಸಲು ಪ್ರಭಾವ ಬೀರುವುದು, ಸಾರ್ವಜನಿಕ ಅಭಿಯೋಜಕರನ್ನು ಬದಲಾಯಿಸುವುದು ಮತ್ತು ಪೊಲೀಸರನ್ನು ಮತ್ತು ತನಿಖೆಯನ್ನು ಬೇರೆಡೆಗೆ ತಿರುಗಿಸುವ ಕೆಲಸ ಮಾಡಿದ್ದಾರೆ.
ಅರ್ಜಿದಾರರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕಾರಣ ತಮ್ಮ ಪ್ರಭಾವ ಬಳಸಿಕೊಂಡು ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ಸಾಕ್ಷ್ಯ ನಾಶಕ್ಕೆ ಮತ್ತು ಸುಳ್ಳು ಆರೋಪಪಟ್ಟಿ ಸಲ್ಲಿಸಲು ತನಿಖಾಧಿಕಾರಿಗೆ 2 ಲಕ್ಷ ನೀಡಿದ್ದಾರೆ’ ಎಂದು ಸಿಬಿಐ ಸಲ್ಲಿಸಿರುವ ದಾಖಲೆಗಳನ್ನು ಪೀಠ ಅವಲೋಕಿಸಿ ಜಾಮೀನು ಅರ್ಜಿ ವಜಾಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


