ಬೆಂಗಳೂರು: ಸಾಮಾಜಿಕ ಕಾರ್ಯಕರ್ತನ ವಿರುದ್ಧ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ದೂರು ದಾಖಲು
ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಬಸವನಗುಡಿ ಶಾಸಕ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಾಮಾಜಿಕ ಕಾರ್ಯಕರ್ತನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಬಸವನಗುಡಿ ಶಾಸಕ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಎವಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಾಮಾಜಿಕ ಕಾರ್ಯಕರ್ತನ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆಸ್ಪತ್ರೆ ಮತ್ತು ಶಾಸಕರ ಮಾನಹಾನಿ ಮಾಡಲು ಯತ್ನಿಸುತ್ತಿದ್ದಾರೆ, ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕೆಂದು ಎವಿ ಆಸ್ಪತ್ರೆ ಅಧ್ಯಕ್ಷ ಡಾ.ರಾಜೇಶ್ ಮೂರ್ತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
‘ಆಸ್ಪತ್ರೆ ಹೆಸರು ಹೇಳಿಕೊಂಡು ಸುಖಾಸುಮ್ಮನೇ ಆರೋಪ ಮಾಡಿರುವ ಸಾಮಾಜಿಕ ಕಾರ್ಯಕರ್ತ ಆಸ್ಪತ್ರೆ ಘನತೆಗೆ ಧಕ್ಕೆ ತಂದಿದ್ದಾರೆ’ ಎಂದು ಆರೋಪಿಸಿ ಎ.ವಿ. ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಆಡಳಿತ ಮಂಡಳಿ ಗಿರಿನಗರ ಠಾಣೆಗೆ ದೂರು ನೀಡಿದೆ. ಅದರನ್ವಯ ವೆಂಕಟೇಶ್ ಅವರಿಗೆ ಸೋಮವಾರ ನೋಟಿಸ್ ನೀಡಿರುವ ಪೊಲೀಸರು, ವಿಚಾರಣೆಗಾಗಿ ಠಾಣೆಗೆ
ಹಾಜರಾಗುವಂತೆ ಸೂಚಿಸಿದ್ದಾರೆ.
ಬನಶಂಕರಿ ಮೂರನೇ ಹಂತದಲ್ಲಿ ಆಸ್ಪತ್ರೆಯಿದೆ, ಬಸವನಗುಡಿ ಶಾಸಕ ಖಾಸಗಿ ಆಸ್ಪತ್ರೆಗಳ ಮೂಲಕ ಕೋವಿಡ್ ಲಸಿಕೆ ಮಾರಾಟ ಮಾಡಿಸಿ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಆಡಿಯೊ ಸಮೇತ ನಗರ ಪೊಲೀಸ್ ಕಮಿಷನರ್ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ನೀಡಿದ್ದರು.
ಆದರೆ ಈ ಸಂಬಂಧ ಸ್ಪಷ್ಟನೆ ನೀಡಿರುವ ರಾಜೇಶ್ ಮೂರ್ತಿ ಲಸಿಕೆ ಮಾರಾಟಕ್ಕೂ ಶಾಸಕರಿಗೂ ಯಾವುದೇ ಸಂಬಂಧವಿಲ್ಲ, ಘಟನೆಯ ಬಗ್ಗೆ ವಿಷಾಧ ವ್ಯಕ್ತಪಡಿಸಿದ ಅವರು ಫೋನ್ ಕರೆ ವಿವರಗಳನ್ನು ತನಿಖೆ ಮಾಡುವಂತೆ ಪೊಲೀಸರಿಗೆ ಮನವಿ ಮಾಡಿದರು. ಅವರ ಸಂಭಾಷಣೆಯ ಬಗ್ಗೆ ವಿವರಗಳನ್ನು ಕೋರಿ ಸಾಮಾಜಿಕ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


