ರಾಜ್ಯ

ಕೋವಿಡ್ ನಿಂದ ತೀವ್ರ ಆರ್ಥಿಕ ಸಂಕಷ್ಟ: ಚಾಮರಾಜನಗರದಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

ಕೊರೋನಾ ಸೋಂಕು ಹಲವರ ಜೀವನದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಿದೆ. ಹಲವರ ಜೀವನವನ್ನು ಬುಡಮೇಲು ಮಾಡಿದೆ. ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಬೀದಿಗೆ ಬಂದಿವೆ.

ಕೋವಿಡ್ ನಿಂದ ತೀವ್ರ ಆರ್ಥಿಕ ಸಂಕಷ್ಟ: ಚಾಮರಾಜನಗರದಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :

ಚಾಮರಾಜನಗರ: ಕೊರೋನಾ ಸೋಂಕು ಹಲವರ ಜೀವನದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಿದೆ. ಹಲವರ ಜೀವನವನ್ನು ಬುಡಮೇಲು ಮಾಡಿದೆ. ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಬೀದಿಗೆ ಬಂದಿವೆ.

ಚಾಮರಾಜನಗರ ಜಿಲ್ಲೆಯ ಹೆಚ್ ಮುಖಹಳ್ಳಿ ಗ್ರಾಮದ ಒಂದೇ ಕುಟುಂಬದ ನಾಲ್ವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಟುಂಬದ ಯಜಮಾನ ಮಹದೇವಸ್ವಾಮಿ ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದರು. ಲಾಕ್ ಡೌನ್ ನಿಂದಾಗಿ ಕೈಯಲ್ಲಿ ಕೆಲಸವಿರಲಿಲ್ಲ.

ಇವರ ಪರಿಸ್ಥಿತಿ ಕಂಡು ನೆರೆಹೊರೆಯವರು ನಿಂದಿಸುತ್ತಿದ್ದರಂತೆ. ಇದರಿಂದ ಮಾನಸಿಕವಾಗಿ ತೀವ್ರ ನೊಂದು ಮಹದೇವಸ್ವಾಮಿ ಹಾಗೂ ಅವರ ಪತ್ನಿ ತಮ್ಮ ಇಬ್ಬರು ಹೆಣ್ಣುಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.