ಅಗತ್ಯವಿರುವವರಿಗೆ ಆಹಾರ ಪೂರೈಸಲು ಸ್ವಂತ ವಾಹನ ಬಳಸುವಂತಿಲ್ಲ: ಬೆಂಗಳೂರು ಪೊಲೀಸರ ಎಚ್ಚರಿಕೆ
ಅಗತ್ಯವಿರುವವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ಹೊರಗೆ ತರಬಾರದು ಅವರು ಸರಕು ವಾಹನಗಳನ್ನು ಬಳಸಬೇಕು ಅಥವಾ ವಿತರಣಾ ಕಂಪನಿಗಳ ಮೂಲಕ ಹಂಚಬೇಕು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಅಗತ್ಯವಿರುವವರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸುವ ನೆಪದಲ್ಲಿ ಜನರು ತಮ್ಮ ಸ್ವಂತ ವಾಹನಗಳನ್ನು ಹೊರಗೆ ತರಬಾರದು ಅವರು ಸರಕು ವಾಹನಗಳನ್ನು ಬಳಸಬೇಕು ಅಥವಾ ವಿತರಣಾ ಕಂಪನಿಗಳ ಮೂಲಕ ಹಂಚಬೇಕು ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ತಮ್ಮ ವಾಹನಗಳನ್ನು ಹೊರಗೆ ತರಲು ಈ ನೆಪ ಬಳಸುತ್ತಿದ್ದಾರೆ, ಆದರೆ ಇದನ್ನು ಕ್ಷಮಿಸಲಾಗದು ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ, ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಆಹಾರ ಸಾಗಿಸುತ್ತಿದ್ದ ಹಲವು ಮಂದಿಯ ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಬೊಮ್ಮನಹಳ್ಳಿ ಸಿಗ್ನಲ್ ಬಳಿ ಬಿಎಂಡಬ್ಲ್ಯು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ತಾನು ಅಗತ್ಯವಿರುವವರಿಗೆ ಆಹಾರವನ್ನು ವಿತರಿಸುತ್ತಿದ್ದೇನೆ ಎಂದು ಚಾಲಕ ಹೇಳಿಕೊಂಡಿದ್ದಾನೆ ಮತ್ತು ಕಾರಿನಲ್ಲಿ ಸುಮಾರು 10 ಆಹಾರ ಪ್ಯಾಕೆಟ್‌ಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ ಪ್ಯಾಕೆಟ್‌ಗಳನ್ನು ವಿತರಿಸಲು ಬಯಸುವ ಯಾರಾದರೂ ಸರಕು ವಾಹನಗಳನ್ನು ಬಳಸುವ ಮೂಲಕ ಇದನ್ನು ಮಾಡಬಹುದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅನೇಕ ಸಂಸ್ಥೆಗಳು ಈಗಾಗಲೇ ಈ ಸೇವೆಯನ್ನು ನೀಡುತ್ತಿವೆ. ಇದಕ್ಕಾಗಿ ಅವರು ವಿತರಣಾ ಕಂಪನಿಗಳನ್ನು ಸಹ ಬಳಸಬಹುದು. ಆದರೆ ಅವರು ಕಾರುಗಳಲ್ಲಿ ಅಥವಾ ಬೈಕ್‌ಗಳಲ್ಲಿ ವಿತರಿಸಲು ಸಾಧ್ಯವಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


