ರಾಜ್ಯ

ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಪೂರ್ವ ಸಿದ್ಧತೆ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಪೂರ್ವ ಸಿದ್ಧತೆ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಮುಖ್ಯಮಂತ್ರಿ ನೇತೃತ್ವದಲ್ಲಿನ ಸಭೆ
Published On :

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

8 ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, 63 ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಈ ನಿಯಂತ್ರಣ ಕೊಠಡಿಗಳು ಕಾರ್ಯನಿರ್ವಹಿಸಲಿದ್ದು, ಅನ್-ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು, ಮತ್ತು ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಅಗತ್ಯ ಸಲಕರಣೆಗಳನ್ನು ಸಂಗ್ರಹಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ರಸ್ತೆ ಬದಿ ಮಳೆನೀರು ಚರಂಡಿಗಳ ಹೂಳು ತೆರವುಗೊಳಿಸುವುದು, ಅಡ್ಡಮೋರಿಗಳ ಹೂಳು ತೆಗೆಯುವುದು, ರಾಜ ಕಾಲುವೆ ಸಂಪರ್ಕಿಸುವ ಚರಂಡಿಗಳನ್ನು ಗುರುತಿಸಿ ಸುಸ್ಥಿತಿಯಲ್ಲಿಡಲು ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದರು.

ದೊಡ್ಡ ಕಾಲುವೆಗಳಲ್ಲಿ 26 ವಾಟರ್ ಲೆವೆಲ್ ಸೆನ್ಸರ್ ಗಳನ್ನು ಅಳವಡಿಸಲಾಗಿದೆ.

ಬೆಂಗಳೂರು ಮೇಘ ಸಂದೇಶ ಆಪ್ ನಲ್ಲಿ ಮಳೆಯ ಪ್ರಮಾಣದ ಮಾಹಿತಿ ಲಭ್ಯ. ನೀರು ಸಂಗ್ರಹವಾಗಿರುವ ಸ್ಥಳಗಳು, ಜನರಿಗೆ ಸುರಕ್ಷಿತ ಮಾರ್ಗ ಬಳಕೆಯ ಕುರಿತು ಮಾಹಿತಿ ನೀಡುತ್ತದೆ.

209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳ ಗುರುತಿಸಲಾಗಿದೆ. (58 ಅತಿ ಸೂಕ್ಷ್ಮ, 151 ಸೂಕ್ಷ್ಮ ಪ್ರದೇಶ) ಈ ಪ್ರದೇಶಗಳಲ್ಲಿ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ರೂಪಿಸುವಂತೆ ಸೂಚಿಸಿದರು.

ಬೆಂಗಳೂರು ನಗರದಲ್ಲಿ ತಡೆಗೋಡೆ ಇರುವ 440 ಕಿ.ಮೀ. ಉದ್ದದ ರಾಜಕಾಲುವೆ ಪ್ರದೇಶಗಳ ವಾರ್ಷಿಕ ನಿರ್ವಹಣೆಗೆ ಕ್ರಮ ವಹಿಸಲಾಗಿದೆ. ನಗರದ ಕೆರೆಗಳನ್ನು ದೈನಂದಿನ ಆಧಾರದಲ್ಲಿ ನಿರ್ವಹಿಸಲಾಗುತ್ತಿದ್ದು, ಮಳೆನೀರು ರಾಜಕಾಲುವೆಗಳ ಮೂಲಕ ಕೆರೆಗಳಿಗೆ ಹರಿಯುವಂತೆ ಮಾಡುವುದರಿಂದ ಪ್ರವಾಹ ತಪ್ಪಿಸಬಹುದು ಎಂದು ಸಲಹೆ ನೀಡಿದರು.

ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಅರಣ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಅಬಕಾರಿ ಸಚಿವ ಗೋಪಾಲಯ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.