ಕೋವಿಡ್-19: ರಾಜ್ಯದಲ್ಲಿಂದು 18,324 ಹೊಸ ಪ್ರಕರಣ; 24,036 ಗುಣಮುಖ, 514 ಸಾವು
ರಾಜ್ಯದಲ್ಲಿ ಕೋವಿಡ್-19 ಹೊಸ ಪ್ರಕರಣ ಇಳಿಕೆಯಾಗಿ ಚೇತರಿಕೆ ಪ್ರಮಾಣ ಹೆಚ್ಚಳವಾಗಿದ್ದರೂ ಸಾವಿನ ಪ್ರಮಾಣದಲ್ಲಿ ಇಳಿಕೆ ಕಂಡುಬರುತ್ತಿಲ್ಲ. ಇಂದು 514 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಒಟ್ಟು ಸಂಖ್ಯೆ 30,531ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹೊಸ ಪ್ರಕರಣ ಇಳಿಕೆಯಾಗಿ ಚೇತರಿಕೆ ಪ್ರಮಾಣ ಹೆಚ್ಚಳವಾಗಿದ್ದರೂ ಸಾವಿನ ಪ್ರಮಾಣದಲ್ಲಿ ಇಳಿಕೆ ಕಂಡುಬರುತ್ತಿಲ್ಲ. ಇಂದು 514 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಒಟ್ಟು ಸಂಖ್ಯೆ 30,531ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ 24,036 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 23,36,096ಕ್ಕೆ ಏರಿಕೆಯಾಗಿದೆ.
ಇಂದು ಹೊಸದಾಗಿ 18,324 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಖಚಿತ ಸೋಂಕಿನ ಪ್ರಕರಣಗಳ ಸಂಖ್ಯೆ 26,53,446 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,86,798ಕ್ಕೆ ಆಗಿದೆ. ಸೋಂಕಿನ ಪ್ರಮಾಣ ಶೇ.12.20 ರಷ್ಟಿದ್ದು, ಮರಣ ಪ್ರಮಾಣ ಶೇ. 2.80 ರಷ್ಟಿದೆ.
ಬೆಂಗಳೂರಿನಲ್ಲಿ 3,533 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 347 ಮಂದಿ ಸಾವನ್ನಪ್ಪಿದ್ದಾರೆ. 7672 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


