ಮೆಗಾಸಿಟಿ ವಂಚನೆ ಪ್ರಕರಣ: ಸಚಿವ ಸಿ.ಪಿ. ಯೋಗೇಶ್ವರ ವಿರುದ್ಧ ದೂರು ದಾಖಲು
ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆಗಳ ನಡುವೆಯೇ ಮೆಗಾಸಿಟಿ ಡೆವಲಪರ್ಸ್ ಕಂಪನಿಯ ಗ್ರಾಹಕರಿಗೆ ವಂಚಿಸಿರುವ ಪ್ರಕರಣದಲ್ಲಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ಕ್ರಮ ಸಿಐಡಿಗೆ ದೂರು ಸಲ್ಲಿಸಲಾಗಿದೆ.

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆಗಳ ನಡುವೆಯೇ ಮೆಗಾಸಿಟಿ ಡೆವಲಪರ್ಸ್ ಕಂಪನಿಯ ಗ್ರಾಹಕರಿಗೆ ವಂಚಿಸಿರುವ ಪ್ರಕರಣದಲ್ಲಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ಕ್ರಮ ಸಿಐಡಿಗೆ ದೂರು ಸಲ್ಲಿಸಲಾಗಿದೆ.
ಗ್ರಾಹಕರಿಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಮೆಗಾಸಿಟಿ ನಿವೇಶನ ಸದಸ್ಯರ ಹಿತರಕ್ಷಣಾ ಸಂಘದ ಅಧ್ಯಕ್ಷ ರವೀಂದ್ರ ಬೆಲೆಯೂರು ಸಿಐಡಿ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.
‘1995–2000ದ ಅವಧಿಯಲ್ಲಿ 9,000 ಜನರಿಂದ 70 ಕೋಟಿ ಸಂಗ್ರಹಿಸಿ ವಂಚಿಸಿರುವ ಆರೋಪ ಮೆಗಾಸಿಟಿ ಡೆವಲಪರ್ಸ್ ಮೇಲಿದೆ. 25 ವರ್ಷಗಳಾದರೂ ವಂಚನೆಗೊಳಗಾದ ಗ್ರಾಹಕರಿಗೆ ನ್ಯಾಯ ದೊರಕಿಲ್ಲ. ಕೇಂದ್ರ ಸರ್ಕಾರದ ಗಂಭೀರ ವಂಚನೆ ಪ್ರಕರಣಗಳ ತನಿಖಾ ಕಚೇರಿ (ಎಸ್‌ಎಫ್‌ಐಒ) ಮತ್ತು ರಾಜ್ಯದ ಸಿಐಡಿ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.
ಆದರೂ, ಗ್ರಾಹಕರಿಗೆ ನ್ಯಾಯ ಲಭಿಸಿಲ್ಲ ಎಂದು ಮೇ 31ರಂದು ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಗ್ರಾಹಕರ ವೇದಿಕೆಗಳ ಆದೇಶದಂತೆ 69 ಮಂದಿಗೆ ಪಾವತಿಸಬೇಕಿದ್ದ 4.86 ಕೋಟಿಯನ್ನು 2006ರಿಂದಲೂ ನೀಡಿಲ್ಲ. ಹೂಡಿಕೆದಾರರ ಹಿತಾಸಕ್ತಿ ರಕ್ಷಣಾ ಕಾಯ್ದೆಯ ಅಡಿಯಲ್ಲೂ ಕ್ರಮ ಜರುಗಿಸಿಲ್ಲ. ಕಂಪನಿಯ ಸಂಸ್ಥಾಪಕರಾದ ಸಚಿವ ಯೋಗೇಶ್ವರ್ ವಿರುದ್ಧ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


