ರಾಜ್ಯ

ಜುಲೈ 1ರಿಂದ ಶಾಲೆಗಳು ಆರಂಭ, ಜೂನ್ 15ರಿಂದ ದಾಖಲಾತಿ ಪ್ರಕ್ರಿಯೆ: ಸಚಿವ ಎಸ್‌. ಸುರೇಶ್‌ಕುಮಾರ್

ಕೋವಿಡ್‌-19 ಅಲೆಯ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದ ಆರಂಭದ ಕುರಿತು ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿರುವ ರಾಜ್ಯ ಸರ್ಕಾರ ಜುಲೈ 1ರಿಂದ ಶಾಲೆಗಳು ಆರಂಭಗೊಳ್ಳಲಿವೆ ಎಂದು ಘೋಷಿಸಿದ್ದಾರೆ.

ಜುಲೈ 1ರಿಂದ ಶಾಲೆಗಳು ಆರಂಭ, ಜೂನ್ 15ರಿಂದ ದಾಖಲಾತಿ ಪ್ರಕ್ರಿಯೆ: ಸಚಿವ ಎಸ್‌. ಸುರೇಶ್‌ಕುಮಾರ್
ಸುರೇಶ್ ಕುಮಾರ್
Published On :

ಬೆಂಗಳೂರು: ಕೋವಿಡ್‌-19 ಅಲೆಯ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದ ಆರಂಭದ ಕುರಿತು ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿರುವ ರಾಜ್ಯ ಸರ್ಕಾರ ಜುಲೈ 1ರಿಂದ ಶಾಲೆಗಳು ಆರಂಭಗೊಳ್ಳಲಿವೆ ಎಂದು ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಈ ವಿಷಯ ತಿಳಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್, ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಜೂನ್‌ 15ರಿಂದ ದಾಖಲಾತಿ ಆರಂಭಗೊಳ್ಳಲಿದೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು.

ಕೋವಿಡ್‌ ಪರಿಸ್ಥಿತಿ ಗಮನಿಸಿ, ಆನ್‌ಲೈನ್‌ ಅಥವಾ ಭೌತಿಕ ತರಗತಿಗಳನ್ನು ನಡೆಸುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಪೋಷಕರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು. ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಸಂಬಂಧಿಸಿದ ವಿವಾದ ಹೈಕೋರ್ಟ್‌ ಮುಂದೆ ಇದೆ. ಅಲ್ಲಿ ಸರ್ಕಾರದ ಪರ ವಾದವನ್ನು ಮಂಡಿಸಲಾಗಿದೆ. ನ್ಯಾಯಾಲಯ ಶೀಘ್ರ ತೀರ್ಪು ನೀಡಿದಲ್ಲಿ ಎಲ್ಲಾ ಗೊಂದಲಗಳಿಗೆ ಉತ್ತರ ದೊರೆಯಲಿದೆ ಎಂದು ಮಾಹಿತಿ ನೀಡಿದರು.

Related Article

ಕೊರೋನಾ ನಿಯಂತ್ರಣಕ್ಕೆ ಬಂದರೆ ಮಾತ್ರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸ್ತೀವಿ, ಇಲ್ಲಾಂದ್ರೆ ಇಲ್ಲ: ಸಿಎಂ ಯಡಿಯೂರಪ್ಪ

ವಿಭಿನ್ನ ಮಾದರಿಯಲ್ಲಿ ಜುಲೈ ತಿಂಗಳಿನಲ್ಲಿ ಎಸ್ಎಸ್ಎಲ್'ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಸಚಿವ ಸುರೇಶ್ ಕುಮಾರ್

'ಪರೀಕ್ಷೆ ಸಂಬಂಧ ಯಾವುದೇ ಸಭೆಯಲ್ಲಿ ಪಾಲ್ಗೊಂಡಿಲ್ಲ'; ನಕಲಿ ಸುದ್ದಿ ಕುರಿತು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಸ್ಪಷ್ಟನೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.