ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಒಂದೇ ಕುಟುಂಬದ ಮೂವರು ಸಜೀವ ದಹನ

ಹೆದ್ದಾರಿಯಲ್ಲಿ ಕಾರೊಂದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಕಾರಿನಲ್ಲೇ ದಹಿಸಿ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಒಂದೇ ಕುಟುಂಬದ ಮೂವರು ಸಜೀವ ದಹನ
ಅಪಘಾತಕ್ಕೀಡಾದ ಕಾರು
Published On :

ಮಂಡ್ಯ: ಹೆದ್ದಾರಿಯಲ್ಲಿ ಕಾರೊಂದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಕಾರಿನಲ್ಲೇ ದಹಿಸಿ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಗೂರಿನ ಬಳಿ ಕನಕಪುರ-ಮಳವಳ್ಳಿ ರಸ್ತೆಯಲ್ಲಿ ಇಂದು ಮುಂಜಾನೆ ಈ ದುಘ೯ಟನೆ ಸಂಭವಿಸಿದೆ.

ಘಟನೆ ವೇಳೆ ಕಾರಿನಲ್ಲಿದ್ದ ಶೇಖ್ ಫೈಸಲ್ (44), ಮೆಹಕ್ (33). ಶೇಖ್ ಆಯಿಲ್ (11) ಸಜೀವ ದಹನವಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಕಾರು ಹಲಗೂರು ಬಳಿ ಹಳ್ಳಕ್ಕೆ ಪಲ್ಟಿಯಾಗಿದ್ದು ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತುಕೊಂಡ ಪರಿಣಾಮ ಕಾರಿನಿಂದ ಹೊರಬರಲಾಗದೆ ಮೂವರು ಕಾರಿನಲ್ಲೇ ಸಂಜೀವ ದಹನವಾಗಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.