ರಾಜ್ಯದಲ್ಲಿ ಇಳಿಕೆಯತ್ತ ಕೊರೋನಾ: ಇಂದು 13,800 ಹೊಸ ಪ್ರಕರಣಗಳು ಪತ್ತೆ, 25,346 ಚೇತರಿಕೆ, 365 ಸಾವು
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 13,800 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 2683314ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 268275 ಆಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 13,800 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 2683314ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 268275 ಆಗಿದೆ.
25346 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಒಟ್ಟು ಬಿಡುಗಡೆಯಾದವರ ಸಂಖ್ಯೆ 2383758ಕ್ಕೆ ಏರಿಕೆಯಾಗಿದೆ. ಸೋಂಕಿನಿಂದಾಗಿ 365 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೋನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 31260ಕ್ಕೆ ಏರಿಕೆಯಾಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ.9.69, ಮರಣ ಪ್ರಮಾಣ ಶೇ. 2.64 ರಷ್ಟಿದೆ.
ಬೆಂಗಳೂರು ಮಹಾನಗರದಲ್ಲಿಂದು 2686 ಹೊಸ ಪ್ರಕರಣಗಳು ವರದಿಯಾಗಿದ್ದು, 206 ಮಂದಿ ಸಾವನ್ನಪ್ಪಿದ್ದಾರೆ. 8852 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


