ರಾಜ್ಯ

ರಾಜ್ಯಾದ್ಯಂತ ಇನ್ನೂ ಎರಡು, ಮೂರು ದಿನ ಭರ್ಜರಿ ಮಳೆ ಸಾಧ್ಯತೆ

ಕೇರಳ ಪ್ರವೇಶಿಸಿರುವ ಮುಂಗಾರು ಮರುದಿನವೇ ರಾಜ್ಯದ ಕರಾವಳಿ ಪ್ರವೇಶ ಮಾಡಿದ್ದರಿಂದ ಮುಂದಿನ ಎರಡು, ಮೂರು ದಿನಗಳ ಕಾಲ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದೆ.

ರಾಜ್ಯಾದ್ಯಂತ ಇನ್ನೂ ಎರಡು, ಮೂರು ದಿನ ಭರ್ಜರಿ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೇರಳ ಪ್ರವೇಶಿಸಿರುವ ಮುಂಗಾರು  ಮರುದಿನವೇ ರಾಜ್ಯದ ಕರಾವಳಿ ಪ್ರವೇಶ ಮಾಡಿದ್ದರಿಂದ ಮುಂದಿನ  ಎರಡು, ಮೂರು ದಿನಗಳ ಕಾಲ  ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದೆ. 

ಗುರುವಾರ ರಾತ್ರಿಯಿಂದಲೇ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಮುಂದಿನ ಎರಡು ದಿನ   ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಹೆಚ್ಚಿನ ಮಳೆ ಸಾಧ್ಯತೆ ಕಾರಣ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್, ಉತ್ತರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಚಿಕ್ಕಮಗಳೂರು, ತುಮಕೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.