ರಾಜ್ಯ

ಮೈಸೂರು ಜಿಲ್ಲಾಧಿಕಾರಿಗಳ ಪಾರಂಪರಿಕ ಕಟ್ಟಡ ನಿವಾಸದಲ್ಲಿ ಈಜುಕೊಳ ನಿರ್ಮಾಣ: ನಿಯಮ ಉಲ್ಲಂಘನೆ ಬಗ್ಗೆ ವಾರದಲ್ಲಿ ವರದಿ

1894 ರಲ್ಲಿ ನಿರ್ಮಿಸಲಾದ ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಜಲಸನ್ನಿಧಿಯ ಪ್ರಶಾಂತ ವಿಲ್ಲಾ ಈಗ ವಿವಾದದ ತಾಣವಾಗಿ ಮಾರ್ಪಟ್ಟಿದೆ.

ಮೈಸೂರು ಜಿಲ್ಲಾಧಿಕಾರಿಗಳ ಪಾರಂಪರಿಕ ಕಟ್ಟಡ ನಿವಾಸದಲ್ಲಿ ಈಜುಕೊಳ ನಿರ್ಮಾಣ: ನಿಯಮ ಉಲ್ಲಂಘನೆ ಬಗ್ಗೆ ವಾರದಲ್ಲಿ ವರದಿ
ರೋಹಿಣಿ ಸಿಂಧೂರಿ
Published On :

ಮೈಸೂರು: 1894 ರಲ್ಲಿ ನಿರ್ಮಿಸಲಾದ ಮೈಸೂರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸ ಜಲಸನ್ನಿಧಿಯ ಪ್ರಶಾಂತ ವಿಲ್ಲಾ ಈಗ ವಿವಾದದ ತಾಣವಾಗಿ ಮಾರ್ಪಟ್ಟಿದೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಲಸನ್ನಿಧಿ ಆವರಣದಲ್ಲಿ ಒಳಾಂಗಣ ಈಜುಕೊಳ ಮತ್ತು ಖಾಸಗಿ ಜಿಮ್ ನಿರ್ಮಿಸಿದ ತಿಂಗಳುಗಳ ನಂತರ ಚರ್ಚೆಗೆ ಕಾರಣವಾಗಿದೆ.

ಈ ಸಂಬಂಧ ತನಿಖೆ ನಡೆಸಿ 7 ದಿನಗಳೊಳಗೆ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಕಂದಾಯ ಇಲಾಖೆ ಕಾರ್ಯದರ್ಶಿ ಸೂಚಿಸಿದ್ದಾರೆ. 

ಜೆಡಿಎಸ್ ಶಾಸಕ ಸಾರಾ ಮಹೇಶ್  ಜಿಲ್ಲಾಧಿಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣದ ಬಗ್ಗೆ ಮಾತನಾಡಿದ್ದರು, ಈ ಹಿನ್ನೆಲೆಯಲ್ಲಿ ಮೇ 31 ರಂದು ತನಿಖೆಗೆ ಆದೇಶ ಹೊರಡಿಸಲಾಗಿದೆ.  

ಮುಂದಿನ ದಿನಗಳಲ್ಲಿ ಪ್ರಾದೇಶಿಕ ಆಯುಕ್ತರು ಈಜುಕೊಳ ನಿರ್ಮಾಣವನ್ನು ಪರಿಶೀಲಿಸಲಿದ್ದಾರೆ,ಈ ಸಂಬಂಧ ಇದುವರೆಗೆ ಹಲವು ದಾಖಲೆಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.