ಬೆಂಗಳೂರು: ಮಹಿಳೆಯರ ದೇಹ ಸ್ಪರ್ಶಿಸಿ ಪರಾರಿಯಾಗುತ್ತಿದ್ದ ಸೈಕೋ ಬಂಧನ
ರಾತ್ರಿ ವೇಳೆಯಲ್ಲಿ ಬೈಕ್ ನಲ್ಲಿ ಓಡಾಡುತ್ತ ಅಪರಿಚಿತ ಮಹಿಳೆಯರ ದೇಹ ಸ್ಪರ್ಶಿಸಿ ಆನಂದ ಪಡುತ್ತಿದ್ದ ಸೈಕೋ ಓರ್ವನನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಮಾರ್ ಬಂಧಿತ ಆರೋಪಿ.

ಬೆಂಗಳೂರು: ಬೈಕ್ನಲ್ಲಿ ಸಂಚರಿಸುತ್ತಿದ್ದಾಗ ಮಹಿಳೆಯರ ದೇಹ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿ ಸೈಕೋ ಓರ್ವನನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರುಣ್ ಕುಮಾರ್ ಬಂಧಿತ ಆರೋಪಿ.
ಕೆಜಿಎಫ್ನ ರಾಬರ್ಟ್ಸನ್ ಪೇಟೆಯ ಅರುಣ್ ಕುಮಾರ್ ಮೇ 31ರಂದು ಯುವತಿಯೊಬ್ಬಳ ದೇಹ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದನು. ಈ ಕುರಿತು ಯುವತಿ ಕಂಟ್ರೋಲ್ ರೂಂಗೆ ಕರೆ ಮಾಡಿ ದೂರು ನೀಡಿದ್ದಳು. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
40ಕ್ಕೂ ಅಧಿಕ ಸಿಸಿಟಿವಿ ಹಾಗೂ 80 ಬೈಕ್ಗಳ ತಪಾಸಣೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ, ರಾತ್ರಿ ವೇಳೆ ಬೈಕ್ನಲ್ಲಿ ಸಂಚರಿಸಿ ಮಹಿಳೆಯರ ಹಿಂಭಾಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ. ಮೇ 31ರ ರಾತ್ರಿ ಕೋರಮಂಗಲ 4ನೇ ಹಂತದಲ್ಲಿ ಡೆಲಿವರಿಗೆ ಹೋಗಿದ್ದಾಗ ಅಸಭ್ಯವಾಗಿ ವರ್ತಿಸಿದ್ದನು. ಉತ್ತರ ಭಾರತ ಮೂಲದ ಯುವತಿಯ ಹಿಂಭಾಗ ಸ್ಪರ್ಶಿಸಿ ಪರಾರಿಯಾಗಿದ್ದನು. ಯುವತಿ ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ದೂರು ನೀಡಿದ್ದಳು. ಪ್ರಕರಣವನ್ನು ಕೋರಮಂಗಲ ಪೊಲೀಸರಿಗೆ ಹಸ್ತಾಂತರವಾಗಿತ್ತು.
ಕಳೆದ 3 ತಿಂಗಳಿನಿಂದ ಮೇಸ್ತರಿ ಪಾಳ್ಯದಲ್ಲಿ ವಾಸವಿದ್ದ ಆರೋಪಿ ಅರುಣ್ ಕುಮಾರ್, ಸಹೋದರನೊಂದಿಗೆ ಡಂಜೋ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದನು. ಸಹೋದರರಿಬ್ಬರು ಒಂದೇ ಐಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದೊಂದು ತಿಂಗಳ ಅವಧಿಯಲ್ಲಿ ಮೂರ್ನಾಲ್ಕು ಕಡೆ ಇದೇ ರೀತಿ ಕೃತ್ಯ ಎಸಗಿರುವುದಾಗಿ ಪೊಲೀಸ್ ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


