ರಾಜ್ಯ

ವರ್ಗಾವಣೆ ಆದೇಶ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿವಾಸಕ್ಕೆ ರೋಹಿಣಿ ಸಿಂಧೂರಿ ಭೇಟಿ, ಸಿಎಂ ಮನವರಿಕೆಗೆ ಯತ್ನ 

ತಮ್ಮ ವರ್ಗಾವಣೆ ಆದೇಶ ಹೊರಬಿದ್ದ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭಾನುವಾರ ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ನಿವಾಸಕ್ಕೆ ಆಗಮಿಸಿ ಅವರನ್ನು ಭೇಟಿ ಮಾಡಿದ್ದಾರೆ.

ವರ್ಗಾವಣೆ ಆದೇಶ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ನಿವಾಸಕ್ಕೆ ರೋಹಿಣಿ ಸಿಂಧೂರಿ ಭೇಟಿ, ಸಿಎಂ ಮನವರಿಕೆಗೆ ಯತ್ನ 
ರೋಹಿಣಿ ಸಿಂಧೂರಿ
Published On :

ಬೆಂಗಳೂರು: ತಮ್ಮ ವರ್ಗಾವಣೆ ಆದೇಶ ಹೊರಬಿದ್ದ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭಾನುವಾರ ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ನಿವಾಸಕ್ಕೆ ಆಗಮಿಸಿ ಅವರನ್ನು ಭೇಟಿ ಮಾಡಿದ್ದಾರೆ.

ಸಿಎಂ ಅವರ ಅಧಿಕೃತ ನಿವಾಸ ಕಾವೇರಿಗೆ ಇಂದು ಬೆಳ್ಳಂಬೆಳಗ್ಗೆ ಬಂದ ರೋಹಿಣಿ ಸಿಂಧೂರಿ ವರ್ಗಾವಣೆ ತಡೆಹಿಡಿಯುವಂತೆ ಮುಖ್ಯಮಂತ್ರಿಗಳನ್ನು ಕೋರಿದರು. ಈ ಪ್ರಕರಣದಲ್ಲಿ ನನ್ನಿಂದ ಯಾವುದೇ ತಪ್ಪಾಗಿಲ್ಲ ಎಂದು ಸಿಎಂಗೆ ಮನವರಿಕೆ ಮಾಡಲು ಪ್ರಯತ್ನ ಮಾಡಿದ ರೋಹಿಣಿ ಸಿಂಧೂರಿ ವರ್ಗಾವಣೆ ತಡೆಹಿಡಿಯುವಂತೆ ಮನವಿ ಮಾಡಿದರು.

ಆದರೆ ಯಾವುದೇ ಕಾರಣಕ್ಕೂ ವರ್ಗಾವಣೆ ತಡೆಹಿಡಿಯಲಿಕ್ಕೆ ಆಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಒಮ್ಮೆ ವರ್ಗಾವಣೆ ಆದೇಶ ಹೊರಡಿಸಿದ ಬಳಿಕ ಅದನ್ನು ಹಿಂಪಡೆಯಲು ಆಗುವುದಿಲ್ಲ. ಹೀಗಾಗಿ ಹೊಸ ಇಲಾಖೆಗೆ ಕೆಲಸಕ್ಕೆ ರಿಪೋರ್ಟ್ ಮಾಡಿಕೊಳ್ಳುವಂತೆ ಹೇಳಿರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.