ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ; ಪ್ರಹ್ಲಾದ ಜೋಷಿ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆ ಕೊಡಿಸುವ ಯಾವುದೇ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆ ಕೊಡಿಸುವ ಯಾವುದೇ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಇತ್ತೀಚಿಗೆ ಪದೆ ಪದೆ ಚೆರ್ಚೆಗೆ ಬಂದ ಹಿನ್ನೆಲೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರೀತಿ ಹೇಳಿರಬಹುದು . ಮುಖ್ಯಮಂತ್ರಿಗಳು ಕೊವಿಡ್ ಸಮಯದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು. ಕೊರೋನಾ ಸಂಕಷ್ಟ ಕಾಲದಲ್ಲಿ ಈ ಇಳಿ ವಯಸ್ಸಿನಲ್ಲೂ ಉತ್ತಮ ಕೆಲಸ ಮಾಡುತ್ತಿದ್ದಾರೆ . ಮುಖ್ಯಮಂತ್ರಿ ಯಡಿಯೂರಪ್ಪ ಸಮರ್ಥರಿದ್ದಾರೆ , ಕ್ರಿಯಾಶೀಲತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಜೋಷಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


