ರಾಜ್ಯ

ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಿಸಿದ್ದೀರಾ? ಈಗಲೂ ಸಕ್ರಮಗೊಳಿಸಿಕೊಳ್ಳುವ ಅವಕಾಶ ನಿಮಗಿದೆ!

ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ 2015ರ ಜ.1ಕ್ಕಿಂತ ಮೊದಲು ಅನಧಿ​ಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಅವಕಾಶವನ್ನು 2022ರ ಮಾ.31ರವರೆಗೆ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ಸರ್ಕಾರಿ ಭೂಮಿಯಲ್ಲಿ ಮನೆ ನಿರ್ಮಿಸಿದ್ದೀರಾ? ಈಗಲೂ ಸಕ್ರಮಗೊಳಿಸಿಕೊಳ್ಳುವ ಅವಕಾಶ ನಿಮಗಿದೆ!
ಸಂಗ್ರಹ ಚಿತ್ರ
Published On :

ಬೆಂಗಳೂರು: ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ಕಾರಿ ಜಮೀನುಗಳಲ್ಲಿ 2015ರ ಜ.1ಕ್ಕಿಂತ ಮೊದಲು ಅನಧಿ​ಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಅವಕಾಶವನ್ನು 2022ರ ಮಾ.31ರವರೆಗೆ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕ ಭೂ ಕಂದಾಯ ಕಾಯ್ದೆಯ ಕಲಂ 94 ಸಿ ಮತ್ತು 94 ಸಿಸಿ ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಅರ್ಜಿಗಳನ್ನ ಸ್ವೀಕರಿಸಲು 2019ರ ಮಾ.31ರವರೆಗೆ ಕಾಲಾವಕಾಶ ನಿಗದಿಪಡಿಲಾಗಿತ್ತು. ಸದ್ಯಕ್ಕೆ 2022ರ ಮಾ.31ರ ಕಾಲಾವಕಾಶ ನೀಡಲಾಗಿದೆ. ಅರ್ಜಿಗಳನ್ನು ಸ್ವೀಕರಿಸಿ, ದಾಖಲೆಗಳ ಪರಿಶೀಲನೆ ನಡೆಸಿದ ನಂತರ ಫಲಾನುಭವಿಗಳಿಗೆ 2023ರ ಮಾ.31ರ ಹಕ್ಕುಪತ್ರಗಳನ್ನು ವಿತರಿಸಲಾಗುತ್ತದೆ ಎಂದು ಹೇಳಿದರು.

ಇದೇ ವೇಳೆ ಬಗರ್‌ಹುಕುಂ ಸಾಗುವಳಿಯ ಭೂಮಿ ಸಕ್ರಮಗೊಳಿಸುವ ತಂತ್ರಾಂಶಕ್ಕೆ ಅಪ್‌ಲೋಡ್‌ ಆಗದೇ ಇರುವ 4.83 ಲಕ್ಷ ಅರ್ಜಿಗಳನ್ನು ಜುಲೈ 31 ರೊಳಗೆ ಅಪ್‌ಲೋಡ್‌ ಮಾಡಲಾಗುವುದು. ಇದರಿಂದ ಅರ್ಜಿ ಸಲ್ಲಿಸಿರುವ ಅರ್ಹ ರೈತರ ಜಮೀನು ಸಕ್ರಮಕ್ಕೆ ಅನುಕೂಲವಾಗಲಿದೆ. ಸರ್ಕಾರಿ ಜಮೀನಿನಲ್ಲಿ 2005 ಜನವರಿ 1 ಕ್ಕೂ ಮೊದಲು ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರ ಜಮೀನುಗಳನ್ನು ಸಕ್ರಮಗೊಳಿಸಲು ಅರ್ಜಿಗಳನ್ನು ಅಪ್‌ಲೋಡ್‌ ಮಾಡಲು ಮತ್ತೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.