ಮನೆಯಲ್ಲೇ ಕೋವಿಡ್ ಟೆಸ್ಟ್: ಮೈಸೂರು ವಿವಿಯಿಂದ ರ‍್ಯಾಪಿಡ್ ಡಿಟೆಕ್ಷನ್ ಟೆಸ್ಟ್ ಕಿಟ್ ಅಭಿವೃದ್ಧಿ
ಮನೆಯಲ್ಲೇ ಕೋವಿಡ್–19 ಪರೀಕ್ಷೆ ಮಾಡಿಕೊಳ್ಳಲು ಸಹಾಯವಾಗುವ ರೀತಿಯಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ನೇತೃತ್ವದಲ್ಲಿ ರ‍್ಯಾಪಿಡ್ ಡಿಟೆಕ್ಷನ್ ಟೆಸ್ಟ್ ಕಿಟ್ ಅಭಿವೃದ್ಧಿಪಡಿಸಲಾಗಿದೆ.

ಮೈಸೂರು: ಮನೆಯಲ್ಲೇ ಕೋವಿಡ್–19 ಪರೀಕ್ಷೆ ಮಾಡಿಕೊಳ್ಳಲು ಸಹಾಯವಾಗುವ ರೀತಿಯಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ನೇತೃತ್ವದಲ್ಲಿ ರ‍್ಯಾಪಿಡ್ ಡಿಟೆಕ್ಷನ್ ಟೆಸ್ಟ್ ಕಿಟ್ ಅಭಿವೃದ್ಧಿಪಡಿಸಲಾಗಿದೆ.
ಕೊರೋನಾ ಸೋಂಕು ಪತ್ತೆ ಹಚ್ಚುವಲ್ಲಿ ಶೇ 90ರಷ್ಟು ಯಶಸ್ಸು ಲಭಿಸಿದ್ದು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ (ಐಸಿಎಂಆರ್) ಕಳುಹಿಸುತ್ತಿದ್ದು, ಅನುಮೋದನೆ ಸಿಕ್ಕಿದ ತಕ್ಷಣ ಮಾರುಕಟ್ಟೆಗೆ ಬಿಡಲಾಗುವುದು ಎಂದು ಹೇಳಿದ್ದಾರೆ.
ಹೈದರಾಬಾದ್‌ನ ಲಾರ್ವೆನ್ ಬಯೋಲಾಜಿಕ್ಸ್ ಕಂಪನಿ ಸಹಯೋಗದಲ್ಲಿ ವಿಶ್ವವಿದ್ಯಾಲಯದ ಮೂವರು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದೇವೆ. ವಿಜ್ಞಾನ ಭವನದ ಸಂಚಾಲಕ ಪ್ರೊ.ಎಸ್.ಚಂದ್ರ ನಾಯಕ್ ಹಾಗೂ ಅಣುಜೀವ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಿ.ಡಿ.ಮೋಹನ್ ನೇತೃತ್ವದಲ್ಲಿ ಈ ಸಂಶೋಧನೆ ನಡೆಸಲಾಗಿದೆ ಎಂದು ಎಂದು ಪ್ರೊ.ರಂಗಪ್ಪ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ
ಈ ಸಂಶೋಧನೆಗೆ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಅವರು ಹಣಕಾಸು ನೆರವು ಸೇರಿದಂತೆ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ’ ಎಂದರು. 'ವರ್ಷದಿಂದ ಈ ಸಂಶೋಧನೆ ನಡೆಸಿದ್ದೇವೆ. ಈ ಕಿಟ್ ಬಳಕೆ ಮೂಲಕ ಕೊರೊನಾ ರೂಪಾಂತರಿ ವೈರಸ್‌ಗಳನ್ನು ಸುಲಭ ಹಾಗೂ ನಿಖರವಾಗಿ ಪತ್ತೆ ಹಚ್ಚಬಹುದು. ಸದ್ಯ ಆರ್‌ಟಿಪಿಸಿಆರ್, ರ‍್ಯಾಪಿಡ್ ಆ್ಯಂಟಿಜೆನ್
ಟೆಸ್ಟ್ ಸೇರಿದಂತೆ ಕೋವಿಡ್ ಪರೀಕ್ಷೆಗೆ ಬಳಸುತ್ತಿರುವ ಸಾಧನಗಳ ಮೂಲಕ ಶೇ 40 ರಿಂದ 60 ರಷ್ಟು ಖಚಿತ ಫಲಿತಾಂಶ ದೊರಕುತ್ತಿದೆ' ಎಂದು ಹೇಳಿದರು.
ನಾವು ವಿನ್ಯಾಸಗೊಳಿಸಿರುವ ಸಾಧನ ಬಳಸಿ ಗಂಟಲು ಹಾಗೂ ಮೂಗಿನ ದ್ರವವನ್ನು ತೆಗೆದು ಮನೆಯಲ್ಲೇ ಪರೀಕ್ಷೆ ಮಾಡಬಹುದಾಗಿದೆ. 10 ನಿಮಿಷಗಳಲ್ಲಿ ಫಲಿತಾಂಶ ಬರಲಿದೆ’ ಎಂದು ಮಾಹಿತಿ ನೀಡಿದರು. ಐಸಿಎಂಆರ್ ಅನುಮೋದನೆ ನಂತರ ಅತಿ ಕಡಿಮೆ ದರದಲ್ಲಿ ಈ ಕಿಟ್ ಮಾರಾಟಕ್ಕೆ ಸಿದ್ಧವಾಗಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


