ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ
ಮೈಸೂರು ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ಮೇಯರ್ ಚುನಾವಣೆಯನ್ನು ನ್ಯಾಯಾಲಯದ ತಡೆಯಾಜ್ಞೆಯಂತೆ ಮುಂದೂಡಲಾಗಿದೆ.

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ಮೇಯರ್ ಚುನಾವಣೆಯನ್ನು ನ್ಯಾಯಾಲಯದ ತಡೆಯಾಜ್ಞೆಯಂತೆ ಮುಂದೂಡಲಾಗಿದೆ.
ಪಾಲಿಕೆಯ ಕಾಂಗ್ರೆಸ್ ಸದಸ್ಯ ಪ್ರದೀಪ್ ಚಂದ್ರ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಾರದಿರುವ ಹಾಗೂ ಲಾಕ್‌ಡೌನ್ ಇರುವಾಗ ಚುನಾವಣೆ ನಡೆಸುವುದಕ್ಕೆ ತಕರಾರು ಎತ್ತಿದ್ದರು. ಜೂನ್ 21ರವರೆಗೆ ಯಾವುದೇ ಚುನಾವಣೆ ನಡೆಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಚುನಾವಣೆಗೆ ಅವಕಾಶ ನೀಡಬಾರದು ಎಂದು ಕೋರಿದ್ದರು. ಇವರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿರುವ ಹೈಕೋರ್ಟ್ ಚುನಾವಣೆಗೆ ತಡೆಯಾಜ್ಞೆ ನೀಡಿದೆ.
ಮೈಸೂರು ಪ್ರಾದೇಶಿಕ ಆಯುಕ್ತರ ಸೂಚನೆಯಂತೆ ತಡೆಯಾಜ್ಞೆ ಇರುವ ಕಾರಣ ಚುನಾವಣೆಯನ್ನು ಮುಂದೂಡಿರುವುದಾಗಿ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ ಹೇಳಿಕೆ ನೀಡಿದ್ದಾರೆ. ಜೂ. 11ರಂದು ಮೇಯರ್ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು. ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


