ರಾಜ್ಯ

ಶಬ್ಧ ಮಾಲಿನ್ಯ ಮಾಡುವವರ ವಿರುದ್ಧ ಕ್ರಮಕ್ಕೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಆದೇಶ

ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಕರ್ನಾಟಕ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಶಬ್ದ ಮಾಲಿನ್ಯ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಬ್ಧ ಮಾಲಿನ್ಯ ಮಾಡುವವರ ವಿರುದ್ಧ ಕ್ರಮಕ್ಕೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಆದೇಶ
ಪ್ರವೀಣ್‌ ಸೂದ್‌
Published On :

ಬೆಂಗಳೂರು: ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಕರ್ನಾಟಕ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಶಬ್ದ ಮಾಲಿನ್ಯ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಜೂನ್ 7 ರಂದು ಪ್ರವೀಣ್ ಸೂದ್ ಅವರು ಈ ಆದೇಶವನ್ನು ಹೊರಡಿಸಿದ್ದು, ಶಬ್ಧ ಮಾಲಿನ್ಯಕ್ಕೆ ಕಾರಣರಾದವರ ವಿರುದ್ಧ ಪರಿಸರ ಸಂರಕ್ಷಣಾ ಕಾಯ್ದೆ 1986 ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 

ನಿರ್ಮಾಣ ಹಂತದ ಕಟ್ಟಡಗಳು, ಕೈಗಾರಿಕೆ ಚಟುವಟಿಕೆಗಳು ಜನರೇಟರ್ ಸೆಟ್‌ಗಳು, ಲೌಡ್ ಸ್ಪೀಕರ್‌ಗಳು, ವಾಹನ  ಹಾರ್ನ್ ಗಳು ಮತ್ತು ಇತರ ಯಾಂತ್ರಿಕ ಸಾಧನಗಳಿಂದ ರಾಜ್ಯದಲ್ಲಿ ಶಬ್ದ ಮಾಲಿನ್ಯ ಹೆಚ್ಚಳವಾಗುತ್ತಿದೆ. ಇದರಿಂದ ಜನರ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಹೀಗಾಗಿ ಶಬ್ದ ಮಾಲಿನ್ಯ ನಿಯಂತ್ರಿಸುವುದು ಅವಶ್ಯಕವಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. 

ಸುತ್ತೋಲೆಯಲ್ಲಿ ಶಬ್ಧ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಜನವರಿ 11 ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಉಲ್ಲೇಖಿಸಿರುವುದು ಕಂಡು ಬಂದಿದೆ. 

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್'ಪಿಸಿಬಿ) ಮುಖ್ಯಸ್ಥ ಬ್ರಿಜೇಶ್ ಕುಮಾರ್ ಅವರು ಮಾತನಾಡಿ, 2 ತಿಂಗಳ ಹಿಂದೆಯೇ ಶಬ್ಧಮಾಲಿನ್ಯಕ್ಕೆ ಸಂಬಂಧಿಸಿದಂತೆ ಡಿಜಿಪಿಯವರಿಗೆ ಪತ್ರ ಬರೆಯಲಾಗಿತ್ತು. ಪ್ರಸ್ತುತ ಈ ಸಂಬಂಧ ಕಾಯಿದೆಯನ್ನು ಪರಿಶೀಲಿಸುವ ಪ್ರಕ್ರಿಯೆ ನಡೆಯುತ್ತಿದೆ. ಪರಿಶೀಲನೆ ಬಳಿಕ ಆಯಾ ಸಂಸ್ಥೆಗಳ ಜವಾಬ್ದಾರಿಗಳನ್ನು ಸ್ಪಷ್ಟವಾಗಿ ತಿಳಿಸಲಾಗುತ್ತಿದೆ. ಇದಕ್ಕೆ ಕಾಲಾವಕಾಶದ ಅಗತ್ಯವಿದೆ. ಶಬ್ಧ ಮಾಲೀನ್ಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಮೂರು ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಹೇಳಿದ್ದಾರೆ. 

ಈ ನಡುವೆ ಡಿಜಿಪಿಯವರ ಆದೇಶವನ್ನು ಕೆಎಸ್'ಪಿಸಿಬಿ ಕಾರ್ಯದರ್ಶಿ ಶ್ರೀನಿವಾಸುಲು ಅವರು ಸ್ವಾಗತಿಸಿದ್ದಾರೆ. ಇದೊಂದು ಉತ್ತಮ ನಿರ್ಧಾರ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.