ಬೆಂಗಳೂರು: ಅಪ್ರಾಪ್ತ ಮಕ್ಕಳಿಗೆ ಕಿರುಕುಳ; ತಾಯಿ ಮತ್ತವಳ ಪ್ರಿಯಕರನ ಬಂಧನ
ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ತಾಯಿ ಮತ್ತು ಆಕೆಯ ಪ್ರಿಯಕರನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ತಾಯಿ ಮತ್ತು ಆಕೆಯ ಪ್ರಿಯಕರನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯ ಜಯಮ್ಮ (24) ಹಾಗೂ ಆಕೆ ಪ್ರಿಯಕರ ಹೇಮಂತ್(27) ಬಂಧಿತ ಆರೋಪಿಗಳು. ಖಾಸಗಿ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿರುವ ಜಯಮ್ಮ ದಿನಗೂಲಿ ನೌಕರ ಹೇಮಂತ್ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದಳು.
ಈ ವಿಷಯವನ್ನು ಅಪ್ರಾಪ್ತ ಮಕ್ಕಳು ತನ್ನ ತಂದೆಗೆ ತಿಳಿಸಿದ್ದರು, ಇದರಿಂದ ಕುಪಿತಗೊಂಡ ಜಯಮ್ಮ ಮಕ್ಕಳ ಮೇಲೆ ಉರಿದು ಬಿದ್ದಿದ್ದಾಳೆ. ತನ್ನ ಪ್ರಿಯಕರನ ವಿಷಯ ತಂದೆಗೆ ತಿಳಿಸಿದ್ದಕ್ಕೆ ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾಳೆ.
ಸ್ವಲ್ಪವೂ ಕರುಣೆ ಇಲ್ಲದೆ ಪ್ರಿಯಕರನ ಜೊತೆ ಸೇರಿ ಇಬ್ಬರು ಹೆಣ್ಣು ಮಕ್ಕಳನ್ನು ಮನಬಂದಂತಗೆ ಥಳಿಸಿದ್ದಾಳೆ. ತಾಯಿ, ಪ್ರಿಯಕರ ಇಬ್ಬರು ಮಕ್ಕಳನ್ನು ಕಚ್ಚಿ, ಬೆಂಕಿಯಿಂದ ಸುಟ್ಟು ವಿಕೃತಿ ಮೆರೆದಿದ್ದಾರೆ. ಮಕ್ಕಳು ಕಿರುಚಿಕೊಳ್ಳುತ್ತಿದ್ದ ಶಬ್ದ ಕೇಳಿ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


