ಚಾಮರಾಜನಗರ: ಖಾಸಗಿ ಆಸ್ಪತ್ರೆಯ ನೀರಿನ ತೊಟ್ಟಿಯಲ್ಲಿ ನವಜಾತ ಗಂಡು ಶಿಶು ಶವ ಪತ್ತೆ
ಖಾಸಗಿ ಆಸ್ಪತ್ರೆಯೊಂದರ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.

ಚಾಮರಾಜನಗರ: ಇಲ್ಲಿ ಖಾಸಗಿ ಆಸ್ಪತ್ರೆಯೊಂದರ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.
ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ಸುಮಾರು 6 ದಿನದ ಗಂಡು ಶಿಶು ಇದಾಗಿದ್ದು, ಕರುಳಬಳ್ಳಿ ಕತ್ತರಿಸದೇ ಹಾಗೆ ಬಿಡಲಾಗಿದೆ. ಅಂಗವೈಕಲ್ಯ ಹೊಂದಿರುವ ಕಾರಣ ಹೆತ್ತವರು ಪ್ಲಾಸ್ಟಿಕ್ ಕವರ್‍ನಲ್ಲಿ ಮಗುವನ್ನು ಹಾಕಿ ಬಿಸಾಡಿರಬಹುದು ಎಂದು ಶಂಕಿಸಲಾಗಿದೆ.
ಆಸ್ಪತ್ರೆ ಸಿಬ್ಬಂದಿ ಶವಾಗಾರದ ಬಳಿ ಹೋದಾಗ ದುರ್ನಾತ ಬರುತ್ತಿರುವುದನ್ನು ಗಮನಿಸಿ ಪರಿಶೀಲಿಸಿದಾಗ ಪ್ಲಾಸ್ಟಿಕ್ ಕವರಿನಲ್ಲಿ ಶಿಶು ಶವ ಪತ್ತೆಯಾಗಿದೆ. ಆಸ್ಪತ್ರೆಯಲ್ಲೇ ಹೆರಿಗೆಯಾಗಿದ್ದರೆ ಕರುಳ ಬಳ್ಳಿಯನ್ನು ಕತ್ತರಿಸಲಾಗುತ್ತಿತ್ತು. ಹೀಗಾಗಿ ಆಸ್ಪತ್ರೆಯಲ್ಲಿ ಈ ಮಗು ಹುಟ್ಟಿಲ್ಲ ಎನ್ನಲಾಗಿದೆ. ಸಿಸಿಟಿವಿ ಪರಿಶೀಲಿಸಲಾಗುತ್ತಿದ್ದು ತನಿಖೆ ನಡೆಸಲಾಗುತ್ತಿದೆ.
ಘಟನೆಗೆ ಸಂಬಂಧಿಸಿ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


