ರಾಜ್ಯ

ಜೂನ್ 15ಕ್ಕೆ ಸಿಎಂ ಯಡಿಯೂರಪ್ಪ, ಸಚಿವರು ಮತ್ತು ಬಿಜೆಪಿ ಶಾಸಕರ ನಿವಾಸ ಮುಂದೆ ರೈತ ಸಂಘಟನೆಗಳ ಪ್ರತಿಭಟನೆ 

ಕೋವಿಡ್ ಸೋಂಕಿನ ಅಲೆ ಸಮಾಜದ ಅನೇಕ ವರ್ಗದ ಜನರ ಮೇಲೆ ಅಪಾರ ಪರಿಣಾಮ ಬೀರಿದೆ, ಇನ್ನಿಲ್ಲದ ಸಂಕಷ್ಟವನ್ನು ಕೂಡ ತಂದೊಡ್ಡಿದೆ. ಅದರಲ್ಲಿ ಕೃಷಿ ಸಮುದಾಯ ಕೂಡ ಒಂದು.

ಜೂನ್ 15ಕ್ಕೆ ಸಿಎಂ ಯಡಿಯೂರಪ್ಪ, ಸಚಿವರು ಮತ್ತು ಬಿಜೆಪಿ ಶಾಸಕರ ನಿವಾಸ ಮುಂದೆ ರೈತ ಸಂಘಟನೆಗಳ ಪ್ರತಿಭಟನೆ 
ಬಿ ಎಸ್ ಯಡಿಯೂರಪ್ಪ
Published On :

ಬೆಂಗಳೂರು: ಕೋವಿಡ್ ಸೋಂಕಿನ ಅಲೆ ಸಮಾಜದ ಅನೇಕ ವರ್ಗದ ಜನರ ಮೇಲೆ ಅಪಾರ ಪರಿಣಾಮ ಬೀರಿದೆ, ಇನ್ನಿಲ್ಲದ ಸಂಕಷ್ಟವನ್ನು ಕೂಡ ತಂದೊಡ್ಡಿದೆ. ಅದರಲ್ಲಿ ಕೃಷಿ ಸಮುದಾಯ ಕೂಡ ಒಂದು.

ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಸಿಗದೆ, ಸರಿಯಾದ ಬೆಲೆ ಸಿಗದೆ ರೈತರು ಪರಿತಪಿಸುತ್ತಿದ್ದಾರೆ. ಈ ಸನ್ನಿವೇಶದಲ್ಲಿ ವಿಶೇಷ ಪ್ಯಾಕೇಜ್ ಒದಗಿಸುವಂತೆ ಮತ್ತು ಕೊರೋನಾ ಮೂರನೇ ಅಲೆಗೆ ತಕ್ಷಣವೇ ಸಿದ್ಧತೆ ಮಾಡಿಕೊಳ್ಳುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಪ್ರತಿಭಟನೆಗೆ ಸಜ್ಜಾಗಿವೆ.

ಇದೇ 15ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಿವಾಸದ ಎದುರು ಮತ್ತು ಸಚಿವರು ಹಾಗೂ ಬಿಜೆಪಿಯ ಶಾಸಕರ ಮನೆಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘಟನೆಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.