ರಾಜ್ಯ

ಮಂಡ್ಯ: ಅತ್ತಿಗೆಯನ್ನು ಕೊಂದು ನಾದಿನಿ ಆತ್ಮಹತ್ಯೆ!

ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಅತ್ತಿಗೆಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ಕಂಬದಹಳ್ಳಿಯಲ್ಲಿ ನಡೆದಿದೆ.

ಮಂಡ್ಯ: ಅತ್ತಿಗೆಯನ್ನು ಕೊಂದು ನಾದಿನಿ ಆತ್ಮಹತ್ಯೆ!
ಸಂಗ್ರಹ ಚಿತ್ರ
Published On :

ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಅತ್ತಿಗೆಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ಕಂಬದಹಳ್ಳಿಯಲ್ಲಿ ನಡೆದಿದೆ.

ನಿನ್ನೆ ತಡರಾತ್ರಿ ನಡೆದ ಘಟನೆಯಲ್ಲಿ ನಾದಿನಿ ಗಿರಿಜಾ (31)ಅತ್ತಿಗೆ ಪ್ರಿಯಾಂಕಾ (32) ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ. ಬಳಿಕ ತಾನೂ ಸಹ ನೇಣಿಗೆ ಶರಣಾಗಿದ್ದಾಳೆ.

ಪ್ರಿಯಾಂಕಾ ಹಾಗೂ ಗಿರಿಜಾ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ನಿನ್ನೆ ಸಹ ಇಬ್ಬರ ಜಗಳ ನಡೆದಿದೆ. ಆ ವೇಳೆ ಗಿರಿಜಾ ಅತ್ತಿಗೆಯನ್ನು ಕೊಂದಿದ್ದಾಳೆ. 

ಘಟನೆ ಸಂಬಂಧ ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.