ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಸಚಿವರಾದ ಕೆ ಎಸ್ ಈಶ್ವರಪ್ಪ, ಭೈರತಿ ಬಸವರಾಜ್ ಪ್ರಯಾಣ!
ನಂಬರ್ ಪ್ಲೇಟ್ ಇಲ್ಲದಿರುವ ವಾಹನಗಳಲ್ಲಿ ಪ್ರಯಾಣ ಮಾಡಬಾರದು ಎಂದು ಸರ್ಕಾರದ ನಿಯಮವೇ ಇದೆ, ನಂಬರ್ ಪ್ಲೇಟ್ ಇಲ್ಲದಿರುವ ವಾಹನವನ್ನು ಚಲಾಯಿಸಿ ಸಿಕ್ಕಿಬಿದ್ದು ಅನೇಕರು ದಂಡ ಕಟ್ಟಿಸಿಕೊಳ್ಳುವುದೂ ಇದೆ.

ಶಿವಮೊಗ್ಗ: ನಂಬರ್ ಪ್ಲೇಟ್ ಇಲ್ಲದಿರುವ ವಾಹನಗಳಲ್ಲಿ ಪ್ರಯಾಣ ಮಾಡಬಾರದು ಎಂದು ಸರ್ಕಾರದ ನಿಯಮವೇ ಇದೆ, ನಂಬರ್ ಪ್ಲೇಟ್ ಇಲ್ಲದಿರುವ ವಾಹನವನ್ನು ಚಲಾಯಿಸಿ ಸಿಕ್ಕಿಬಿದ್ದು ಅನೇಕರು ದಂಡ ಕಟ್ಟಿಸಿಕೊಳ್ಳುವುದೂ ಇದೆ.
ಆದರೆ ಜನಸಾಮಾನ್ಯರಿಗೊಂದು ನ್ಯಾಯ, ಜನಪ್ರತಿನಿಧಿಗಳಿಗೊಂದು ನ್ಯಾಯ, ರಾಜಕಾರಣಿಗಳು ಏನು ಮಾಡಿದರೂ ನಡೆಯುತ್ತದೆ ಎಂಬಂತೆ ಹೇಳುವ ಘಟನೆಗಳು ಆಗಾಗ ನಡೆಯುತ್ತಿರುತ್ತವೆ.
ಇಂದು ಶಿವಮೊಗ್ಗದಲ್ಲಿ ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಪ್ರಯಾಣಿಸಿದ ಕಾರಿನಲ್ಲಿ ನಂಬರ್ ಪ್ಲೇಟ್ ಇರಲಿಲ್ಲ. ಇಬ್ಬರೂ ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಹೋಗಿದ್ದು ಅದು ನಮ್ಮ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರತಿನಿಧಿಗೆ ಲಭ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


