ರಾಜ್ಯ

ಕೋವಿಡ್-19: ಬೆಂಗಳೂರಿನಲ್ಲಿ 1470 ಸೇರಿ ರಾಜ್ಯದಲ್ಲಿಂದು 6835 ಹೊಸ ಪ್ರಕರಣ ಪತ್ತೆ, 15409 ಚೇತರಿಕೆ, 120 ಸಾವು

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 6835 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿನ ಒಟ್ಟು ಖಚಿತ ಪ್ರಕರಣಗಳ ಸಂಖ್ಯೆ 2771969ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಬೆಂಗಳೂರಿನಲ್ಲಿ 1470 ಸೇರಿ ರಾಜ್ಯದಲ್ಲಿಂದು 6835 ಹೊಸ ಪ್ರಕರಣ ಪತ್ತೆ, 15409 ಚೇತರಿಕೆ, 120 ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 6835 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿನ ಒಟ್ಟು ಖಚಿತ ಪ್ರಕರಣಗಳ ಸಂಖ್ಯೆ 2771969ಕ್ಕೆ ಏರಿಕೆಯಾಗಿದೆ. 15409 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 2566774 ಆಗಿದೆ.

ಸೋಂಕಿನಿಂದ ಇಂದು 120 ಸೋಂಕಿತರು ಮೃತಪಟ್ಟಿದ್ದಾರೆ. ಈವರೆಗಿನ ಮೃತರ ಒಟ್ಟು ಸಂಖ್ಯೆ 33033ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 172141 ಆಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ.4.56 ರಷ್ಟಿದ್ದರೆ, ಮರಣ ಪ್ರಮಾಣ ಶೇ.1.75 ರಷ್ಟಿದೆ.  

ಬೆಂಗಳೂರು ನಗರದಲ್ಲಿ 1470 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 2409 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 12 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 85044 ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.