ರಾಜ್ಯ

ಪೊಲೀಸ್ ಗೌರವಗಳೊಂದಿಗೆ ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ: ಸಿಎಂ ಬಿಎಸ್ ಯಡಿಯೂರಪ್ಪ

'ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಪೊಲೀಸ್ ಗೌರವಗಳೊಂದಿಗೆ ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ: ಸಿಎಂ ಬಿಎಸ್ ಯಡಿಯೂರಪ್ಪ
ಯಡಿಯೂರಪ್ಪ
Published On :

ಬೆಂಗಳೂರು: 'ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, 'ಸಂಚಾರಿ ವಿಜಯ್ ಅವರು ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ  ನಷ್ಟವುಂಟಾಗಿದೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿಯನ್ನು ನೀಡಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಅಂತೆಯೇ 'ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸುತ್ತಾ, ಪ್ರತಿಭಾವಂತ  ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

Related Article

'ಅಂಗಾಂಗ ದಾನ' ಸಾಮಾನ್ಯ ಸಂಗತಿಯಲ್ಲ, ಸಂಚಾರಿ ವಿಜಯ್ ಕುಟುಂಬಕ್ಕೆ ನನ್ನ ಅನಂತ ವಂದನೆಗಳು: ಸಚಿವ ಅರವಿಂದ ಲಿಂಬಾವಳಿ, ಡಿಸಿಎಂ ಅಶ್ವಥ್ ನಾರಾಯಣ

ಸಂಚಾರ ಮುಗಿಸಿದ ವಿಜಯ್: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ, ಸ್ವಗ್ರಾಮ ಪಂಚನಹಳ್ಳಿಯಲ್ಲಿಂದು ಅಂತ್ಯಕ್ರಿಯೆ

ಸಾವಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್: ಹಲವರಿಗೆ ಅಂಗಾಂಗ ದಾನ

ಹೆಲ್ಮೆಟ್ ಧರಿಸಿದ್ದರೇ ಬದುಕುಳಿಯುತ್ತಿದ್ದರಾ ಸಂಚಾರಿ ವಿಜಯ್ ?

ಸಂಚಾರಿ ವಿಜಯ್ ನಮ್ಮನ್ನಗಲಿದ್ದಾರೆ: ಅಪೋಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.