ಕೋವಿಡ್ ಲಸಿಕೆ: ಬಿಜೆಪಿ ಕಾರ್ಯಕರ್ತರಿಂದ ಹೊಸ ಕಾರ್ಯಯೋಜನೆ
ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ.

ಬೆಂಗಳೂರು: ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್ ಅವರು, ಮುಂದಿನ ಎರಡು ಅಥವಾ ಮೂರು ತಿಂಗಳಲ್ಲಿ ಬಿಜೆಪಿ ರಾಜ್ಯ ಘಟಕವು ಕರ್ನಾಟಕದಲ್ಲಿ ಶೇ 100 ರಷ್ಟು ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ರಾಜ್ಯದಾದ್ಯಂತ ಸ್ಥಾಪಿಸಲಾಗಿರುವ ಬೂತ್‌ಗಳಲ್ಲಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ. ಅಲ್ಲದೆ, 25 ಲಕ್ಷ ಕಾರ್ಯಕರ್ತರು ಸೇವೆ ಸಲ್ಲಿಸಲಿದ್ದಾರೆಂದು ತಿಳಿಸಿದ್ದಾರೆ.
ಕೋವಿಡ್ ಎಲ್ಲಾ ನಿಯಮಗಳು ಹಾಗೂ ಮುನ್ನೆಚ್ಚರಿಕೆಗಳನ್ನು ಅನುಸರಿಸಿ ಕಳೆದ ತಿಂಗಳಷ್ಟೇ ರಾಜ್ಯ ಬಿಜೆಪಿ ರಾಜ್ಯದ 29,000 ಗ್ರಾಮಗಳ 58,000 ಬೂತ್‌ಗಳಲ್ಲಿ ಕೋವಿಡ್ ಸೋಂಕಿತರಿಗೆ ಸಹಾಯ ಮಾಡುವ ಕಾರ್ಯವನ್ನು ಆರಂಭಿಸಿತ್ತು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 7 ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಸೇವಾ ಹಿ ಸಂಘಟನ್ ಕಾರ್ಯಕ್ರಮವನ್ನು ಬಿಜೆಪಿ ಆರಂಭಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


