'ರಾಬರ್ಟ್' ನಿರ್ಮಾಪಕ ಹತ್ಯೆ ಯತ್ನ ಪ್ರಕರಣ: ರೌಡಿಶೀಟರ್ ರಾಜೀವ್ ಬಂಧನ
ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ರಾಜೀವ್ ಅಲಿಯಾಸ್ ಕರಿಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ರಾಜೀವ್ ಅಲಿಯಾಸ್ ಕರಿಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ನೇಪಾಳ ಬಾರ್ಡರ್ ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕೆ.ಜೆ.ನಗರ ಇನ್ಸ್‌ಪೆಕ್ಟರ್ ಚೇತನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಈತ ಸಿಕ್ಕಿಬಿದ್ದಿದ್ದಾನೆ.
ಕಳೆದ ವರ್ಷ ಉಮಾಪತಿ ಶ್ರೀನಿವಾಸ್ ಗೌಡ ಮತ್ತು ಅವರ ಸಹೋದರ ದೀಪಕ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ರೌಡಿಶೀಟರ್ ರಾಜೀವ್ ವ್ಯವಸ್ಥಿತ ಸಂಚಿನ ದರೋಡೆ, ಭೂಗತ ಚಟುವಟಿಕೆ ನಡೆಸುತ್ತಿದ್ದನು.
ಪ್ರಕರಣ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.ಇದಕ್ಕೆ ಹಿಂದೆ ಹನ್ನೊಂದು ಜನರನ್ನು ಪೊಲೀಸರು ಬಂಧಿಸಿದ್ದು ರಾಜೀವ್ ಬಂಧನಕ್ಕಾಗಿ ಎರಡು ತಿಂಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ್ದರು.
ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರವನ್ನು ನಿರ್ಮಿಸಿದ್ದ ಉಮಾಪತಿ ಶ್ರೀನಿವಾಸ್ ಗೌಡ ಚಿತ್ರದ ಮೂಲಕ ಸಾಕಷ್ಟು ದೊಡ್ಡ ಲಾಭ ಪಡೆದಿದ್ದಾರೆ. ಪ್ರಸ್ತುತ ಅವರು ಶ್ರೀಮುರಳಿ ಅಭಿನಯದ ‘ಮದಗಜ’ ಚಿತ್ರದ ನಿರ್ಮಾಣದಲ್ಲಿ ತೊಡಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


