ಸಿಎಂ ಸ್ಥಾನದಿಂದ ಬಿಎಸ್ ವೈ ಕೆಳಗಿಳಿಸುವ ಹುನ್ನಾರ ಮಾಡಿದರೆ ಸಹಿಸುವುದಿಲ್ಲ: ವೀರಶೈವ ಶ್ರೀಗಳ ಎಚ್ಚರಿಕೆ
ಮುಖ್ಯಮಂತ್ರಿ ಯಡಿಯೂರಪ್ಪನವರ ಗೌರವಕ್ಕೆ ಧಕ್ಕೆ ಉಂಟು ಮಾಡುವ ರೀತಿ ಅನಾವಶ್ಯಕವಾಗಿ ಹೇಳಿಕೆ ನೀಡಿ ಅವರ ಮನಸ್ಸಿಗೆ ನೋವುಂಟು ಮಾಡುವಂತೆ ನಡೆದುಕೊಳ್ಳುತ್ತಿರುವುದು ಸಹಿಸಲಾಗದು.

ತುಮಕೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ಗೌರವಕ್ಕೆ ಧಕ್ಕೆ ಉಂಟು ಮಾಡುವ ರೀತಿ ಅನಾವಶ್ಯಕವಾಗಿ ಹೇಳಿಕೆ ನೀಡಿ ಅವರ ಮನಸ್ಸಿಗೆ ನೋವುಂಟು ಮಾಡುವಂತೆ ನಡೆದುಕೊಳ್ಳುತ್ತಿರುವುದು ವೀರಶೈವ ಲಿಂಗಾಯತ ಸಮಾಜಕ್ಕೆ ಮಾಡುವ ಅವಮಾನ ಎಂದು ತಿಪಟೂರಿನ ಷಡಕ್ಷರ ಮಠದ ಶ್ರೀ ರುದ್ರಮುನಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಿಪಟೂರಿನಲ್ಲಿ ಸಭೆ ಸೇರಿದ್ದ 10 ವಿವಿಧ ಮಠಗಳ ಮಠಾಧೀಶರು ತುರ್ತು ಪ್ರತಿಕಾಗೋಷ್ಠಿ ನಡೆಸಿ, ಯಡಿಯೂರಪ್ಪನವರು ಅಧಿಕಾರವನ್ನು ಪೂರ್ಣಗೊಳಿಸಲು ಎಲ್ಲರೂ ಬೆಂಬಲ ನೀಡಬೇಕು. ಸಿಎಂ ಸ್ಥಾನದಿಂದ ಬಿಎಸ್ವೈ ಅವರನ್ನು ಕೆಳಗಿಳಿಸುವ ಹುನ್ನಾರವನ್ನು ಯಾವುದೇ ಕಾರಣಕ್ಕೂ ವೀರಶೈವ ಲಿಂಗಾಯತ ಸಮಾಜ ಸಹಿಸುವುದಿಲ್ಲ. ಕುತಂತ್ರ ನಡೆದಲ್ಲಿ
ಸ್ವಾಮೀಜಿಗಳ ನೇತೃತ್ವದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಯಡಿಯೂರಪ್ಪ ಅವರು ಎಲ್ಲಾ ಸಮುದಾಯದ ಪ್ರಶ್ನಾತೀತ ನಾಯಕರಾಗಿದ್ದಾರೆ, ಸಿಎಂ ಆಗಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ, ಅವರು ತಮ್ಮ ಅಧಿಕಾರವಧಿಯನ್ನು ಸಂಪೂರ್ಣಗೊಳಿಸಲು ಬಿಜೆಪಿ ಹೈಕಮಾಂಡ್ ಅವಕಾಶ ಮಾಡಿಕೊಡಬೇಕೆಂದು ಸ್ವಾಮೀಜಿಗಳು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


