ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 1,263 ಸೇರಿ 5,815 ಹೊಸ ಪ್ರಕರಣ ಪತ್ತೆ; 161 ಮಂದಿ ಸಾವು!

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 5,815 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,01,936ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 1,263 ಸೇರಿ 5,815 ಹೊಸ ಪ್ರಕರಣ ಪತ್ತೆ; 161 ಮಂದಿ ಸಾವು!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 5,815 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,01,936ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 161 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 33,763ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1,263 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,04,326ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 23 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 11,832 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,37,279ಕ್ಕೆ ಏರಿಕೆಯಾಗಿದೆ. ಇನ್ನು 1,30,872 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,71,765 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 5,815 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 3.38ಕ್ಕೆ ಇಳಿದಿದೆ.

ಹೊಸ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 1,263, ಬೆಳಗಾವಿಯಲ್ಲಿ 222, ಬಳ್ಳಾರಿಯಲ್ಲಿ 128, ಚಿಕ್ಕಬಳ್ಳಾಪುರದಲ್ಲಿ 105, ಚಿಕ್ಕಮಗಳೂರು 177, ದಕ್ಷಿಣ ಕನ್ನಡದಲ್ಲಿ 832, ದಾವಣಗೆರೆಯಲ್ಲಿ 194, ಹಾಸನದಲ್ಲಿ 391, ಮೈಸೂರಿನಲ್ಲಿ 594, ಶಿವಮೊಗ್ಗದಲ್ಲಿ 223, ತುಮಕೂರಿನಲ್ಲಿ 182, ಉಡುಪಿಯಲ್ಲಿ 174, ಉತ್ತರ ಕನ್ನಡದಲ್ಲಿ 144 ಪ್ರಕರಣಗಳು ವರದಿಯಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.