ಕೋವಿಡ್-19: ಅನ್'ಲಾಕ್ 2.0 ಬಗ್ಗೆ ಇಂದು ರಾಜ್ಯ ಸರ್ಕಾರ ನಿರ್ಧಾರ
ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಕೊಂಚ ಇಳಿಮುಖವಾಗಿದ್ದು, ಅನ್ ಲಾಕ್ 2.0 ಬಗ್ಗೆ ಶನಿವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳುವರು ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಕೊಂಚ ಇಳಿಮುಖವಾಗಿದ್ದು, ಅನ್ ಲಾಕ್ 2.0 ಬಗ್ಗೆ ಶನಿವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳುವರು ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಎರಡನೇ ಹಂತದ ಲಾಕ್ ಡೌನ್ ಸಡಿಲಿಕೆ ಬಗ್ಗೆ ಶನಿವಾರ ಸಂಜೆ ನಡೆಯಲಿರುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಕೊರೊನಾ ಮೂರನೇ ಅಲೆ ಭೀತಿ ಕೂಡ ಎದುರಾಗಿದೆ. ಈ ನಿಟ್ಟಿನಲ್ಲಿಯೂ ಎಚ್ಚರಿಕೆ ಕೈಗೊಳ್ಳುವ ಅಗತ್ಯವಿದೆ. ಇದರ ನಡುವೆ ಎರಡನೇ ಹಂತದ ಅನ್ ಲಾಕ್ ನಲ್ಲಿ ಯಾವುದಕ್ಕೆಲ್ಲ ವಿನಾಯಿತಿ ನೀಡಬೇಕು ಎಂಬ ಬಗ್ಗೆಯೂ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರೊಂದಿಗೂ ಜೂನ್ 21ರಿಂದ ಅನ್ ಲಾಕ್ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಈಗಿರುವ ಲಾಕ್ ಡೌನ್ ಸ್ವಲ್ಪ ಮಟ್ಟಿಗೆ ಸಡಿಲಿಸಲಾಗುವುದು. ಆದರೆ ಕೊರೊನಾ ಮೂರನೇ ಅಲೆ ಪ್ರರಂಭವಾಗಲಿದೆ ಎಂಬ ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಅಗತ್ಯವಾಗಿದೆ. ಹಾಗಾಗಿ ವೀಕೆಂಡ್ ನಲ್ಲಿ ಈಗಿನಂತೆಯೇ ಕರ್ಫ್ಯೂ ಮುಂದುವರೆಸುವ ಬಗ್ಗೆಯೂ ಚಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಇಂದು ಸಂಜೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಈ ವೇಳೆ ಕೋವಿಡ್ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬಳಿಕ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


