ಸ್ಪುಟ್ನಿಕ್ ವಿ ಲಸಿಕೆ ಅಭಿಯಾನ ಮುಂದೂಡಿದ ಮಣಿಪಾಲ್ ಆಸ್ಪತ್ರೆ
ಎರಡನೇ ಡೋಸ್ ಸ್ಪುಟ್ನಿಕ್ ವಿ ಲಸಿಕೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಲಸಿಕೆ ಮಾರುಕಟ್ಟೆ ಬಿಡುಗಡೆ ಮಾಡುವುದನ್ನು ಮುಂದೂಡಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಹೇಳಿದೆ.

ಬೆಂಗಳೂರು; ಎರಡನೇ ಡೋಸ್ ಸ್ಪುಟ್ನಿಕ್ ವಿ ಲಸಿಕೆ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಲಸಿಕೆ ಮಾರುಕಟ್ಟೆ ಬಿಡುಗಡೆ ಮಾಡುವುದನ್ನು ಮುಂದೂಡಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಹೇಳಿದೆ.
ಸಮಸ್ಯೆಗಳು ಎದುರಾಗುವುದಕ್ಕೂ ಮುನ್ನ ಎರಡನೆಯ ಡೋಸ್ ಲಸಿಕೆ ಸಮರ್ಪಕವಾಗಿ ಸಂಗ್ರಹಿಸುವವರೆಗೆ ಅನ್ನು ಸ್ಪುಟ್ನಿಕ್ ವಿ ಲಸಿಕೆ ಅಭಿಯಾನವನ್ನು ಮುಂದೂಡುವ ನಿರ್ಧಾರಕ್ಕೆ ಬಂದಿದ್ದೇವೆ. ಸಾರ್ವಜನಿಕರಿಗೆ ಶೀಘ್ರಗತಿಯಲ್ಲಿ ಲಸಿಕೆ ವಿತರಿಸಲು ಎಲ್ಲಾ ರೀತಿಯಲ್ಲೂ ಪ್ರಯತ್ನಿಸಲಾಗುತ್ತದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೊವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ನಂತರ ಭಾರತದಲ್ಲಿ ತುರ್ತು ಸ್ಥಿತಿಯಲ್ಲಿ ಬಳಸಲು ಆನುಮತಿ ಪಡೆದಿರುವ ಮೂರನೇ ಲಸಿಕೆ ಸ್ಪುಟ್ನಿಕ್ ವಿ ಆಗಿದೆ.
ರಷ್ಯನ್ ಸಾವರೀನ್ ವೆಲ್ತ್ ಫಂಡ್ (ಆರ್ಡಿಐಎಫ್) ನೆರವಿನಿಂದ ಸ್ಪುಟ್ನಿಕ್ ವಿ ಲಸಿಕೆಯನ್ನು ರಷ್ಯಾದ ಗಮಾಲೆಯಾ ಇನ್ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದ್ದು, ಜಾಗತಿವಾಗಿ ಆದರ ಮಾರ್ಕೆಟಿಂಗ್ ಸಹ ಮಾಡುತ್ತಿದೆ.
ಸ್ಪುಟ್ನಿಕ್ ವಿ ಲಸಿಕೆಯು ಎರಡು-ಡೋಸ್ಗಳ ಶಾಟ್ ಆಗಿದ್ದು ಇದು ಸೋಂಕನ್ನು ತಡೆಯುವಲ್ಲಿ ಶೇಕಡಾ 91.6 ರಷ್ಟು ಪರಿಣಾಮಕಾರಿಯಾಗಿದೆ. ಎರಡು ಡೋಸ್ ಲಸಿಕೆಗಳನ್ನು 21 ದಿನಗಳ ಅಂತರದಲ್ಲಿ ನೀಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


