ಮೈಸೂರು: 10 ದಿನದಲ್ಲಿ 769 ಮಕ್ಕಳಿಗೆ ಕೊರೋನಾ ಸೋಂಕು
ಮೈಸೂರಿನಲ್ಲಿ ಕಳೆದ 10 ದಿನಗಳಲ್ಲಿ ಬರೋಬ್ಬರಿ 769 ಮಕ್ಕಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಕೊರೋನಾ 3ನೇ ಆಲೆ ಆತಂಕ ನಡುವಲ್ಲೇ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿರುವುದು ಪೋಷಕರಲ್ಲಿ ಭೀತಿ ಹುಟ್ಟಿಸಿದೆ.

ಮೈಸೂರು: ಮೈಸೂರಿನಲ್ಲಿ ಕಳೆದ 10 ದಿನಗಳಲ್ಲಿ ಬರೋಬ್ಬರಿ 769 ಮಕ್ಕಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಕೊರೋನಾ 3ನೇ ಆಲೆ ಆತಂಕ ನಡುವಲ್ಲೇ ಮಕ್ಕಳಲ್ಲಿ ಸೋಂಕು ಹೆಚ್ಚಾಗುತ್ತಿರುವುದು ಪೋಷಕರಲ್ಲಿ ಭೀತಿ ಹುಟ್ಟಿಸಿದೆ.
ಜಿಲ್ಲೆಯಲ್ಲಿ ಜೂನ್9-18 ರವರೆಗೆ 18 ವರ್ಷದೊಳಗಿನ ಒಟ್ಟು 769 ಮಕ್ಕಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರಿಲ್ಲಿ 301 ಮಂದಿ 0-10 ವರ್ಷದೊಳಗಿನ ಮಕ್ಕಳಾಗಿದ್ದಾರೆಂದು ತಿಳಿದುಬಂದಿದೆ.
ಮೈಸೂರಿನಲ್ಲಿ ಕಳೆದ 10 ದಿನಗಳಲ್ಲಿ ಒಟ್ಟು 7,600 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಶೇ.10 ರಷ್ಟು ಮಂದಿ 18 ವರ್ಷದೊಳಗಿನವರಾಗಿದ್ದಾರೆಂದು ವರದಿಗಳು ತಿಳಿಸಿವೆ.
ಸೋಂಕಿಗೊಳಗಾಗಿರುವ ಮಕ್ಕಳಲ್ಲಿ ಹಲವರು ಲಕ್ಷಣ ರಹಿತರಾಗಿದ್ದಾರೆ. ಲಕ್ಷಣರಹಿತ ಮಕ್ಕಳನ್ನು ಹೋಂ ಐಸೋಲೇಷನ್ ನಲ್ಲಿ ಇರಿಸಲಾಗಿದೆ. ವಯಸ್ಕರಿಗೆ ಹೋಲಿಕೆ ಮಾಡಿದರೆ, ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ಕಡಿಮೆಯಿದೆ. ಕಳೆದ ವರ್ಷ ಮಾರ್ಚ್ ತಿಂಗಳಿನಿಂದ ಈ ವರೆಗೂ 0-10 ವರ್ಷದೊಳಗಿನ ಒಟ್ಟು 4,500 ಮಕ್ಕಳು ಸೋಂಕಿಗೊಳಗಾಗಿದ್ದಾರೆ. ಕೊರೋನಾ ಮೊದಲನೇ ಅಲೆ ವೇಳೆ 1,521 ಮಕ್ಕಳಿಗೆ ಸೋಂಕು ತಗುಲಿದ್ದು, ಏಪ್ರಿಲ್ 2021 ರಿಂದ ಇಲ್ಲಿಯವರೆಗೆ 3,000 ಕ್ಕೂ ಹೆಚ್ಚು ಮಕ್ಕಳು ಸೋಂಕಿಗೆ ಒಳಗಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ನಡುವೆ ಕೊರೋನಾ ಮೂರನೇ ಅಲೆ ಆತಂಕ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತ ಮಂಡಳಿಯು ಪರಿಸ್ಥಿತಿ ಎದುರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿಕೊಳ್ಳುತ್ತಿದೆ.
ಡಿಸಿ ಡಾ.ಬಗಾಡಿ ಗೌತಮ್ ಅವರು ಮಾತನಾಡಿ, ಪ್ರಸ್ತುತ ಪರಿಸ್ಥಿತಿ ಸುಧಾರಿಸುವತ್ತ ಗಮನಹರಿಸಲಾಗುತ್ತಿದೆ. ಪಿಡಿಯಾಟ್ರಿಕ್ ಮ್ಯಾನೇಜ್ಮೆಂಟ್ ಬಗ್ಗೆ ಆಡಳಿತ ಮಂಡಳಿ ಗಮನಹರಿಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


