ಮಂಗಳೂರು: ಇಲಿ ಪಾಷಾಣ ಸೇವಿಸಿದ ಮಾಜಿ ಸೈನಿಕನ ಎರಡೂವರೆ ವರ್ಷದ ಪುತ್ರಿ ಮೃತ್ಯು
ಆಘಾತಕಾರಿ ಘಟನೆಯೊಂದರಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿದ ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ಮಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿದ ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.
ಶನಿವಾರ ಈ ಘಟನೆ ನಡೆದಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜತ್ತೂರು ಗ್ರಾಮದ ಕೆಮ್ಮಾರು ಮೂಲದ ಮಾಜಿ ಸೈನಿಕ ಶೈಜು ಅವರ ಪುತ್ರಿ ಹೀಗೆ ಇಲಿ ಪಾಷಾಣ ಸೇವಿಸಿ ಮೃತಪಟ್ಟಿದ್ದಾಳೆ.
ತನ್ನ ಮಗಳು ಪೇಸ್ಟ್ ತಿನ್ನುವುದನ್ನು ಕಂಡ ಶೈಜು ಅವರಿಗೆ ಅದು ಇಲಿ ಪಾಷಾಣ ಎಂದು ತಡವಾಗಿ ಅರಿವಾಗಿದೆ. ಇಲಿ ಪಾಷಾಣ ತಿಂದ ಬಾಲಕಿ ವಾಂತಿ ಮಾಡಲು ಪ್ರಾರಂಭಿಸಿದ್ದಾಳೆ. ಅವಳನ್ನು ಉಪ್ಪಿನಂಗಡಿಯ ಆಸ್ಪತ್ರೆಗೆ ಮತ್ತು ನಂತರ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಮಂಗಳೂರಿಗೆ ಸ್ಥಳಾಂತರಿಸುವಂತೆ ವೈದ್ಯರು ಕುಟುಂಬಕ್ಕೆ ಸಲಹೆ ನೀಡಿದರು.
ಆದರೆ ಅಷ್ಟರಲ್ಲೇ ಮಗುವಿನ ಸ್ಥಿತಿ ಹದಗೆಟ್ಟಿತು ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಆಕೆ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.
ಘಟನೆ ಸಂಬಂಧ ಉಪ್ಪಿನಂಗಡಿ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


