ರಾಜ್ಯ

ಸತ್ಯ ಗೊತ್ತಾದ ಬಳಿಕ ತನಿಖೆ ಅಗತ್ಯ ಇಲ್ಲ: ಭದ್ರಾ ಮೇಲ್ದಂಡೆ ಯೋಜನೆ ಭ್ರಷ್ಟಾಚಾರ ಆರೋಪ ಕುರಿತು ಬೊಮ್ಮಾಯಿ ಹೇಳಿಕೆ

ಭದ್ರಾ ಮೇಲ್ದಂಡೆ ಯೋಜನೆಯ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಬೇಕೆಂಬ ವಿರೋಧ ಪಕ್ಷಗಳ ಆಗ್ರಹವನ್ನು ತಳ್ಳಿಹಾಕಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳೇ ವಾಸ್ತವ ಅಂಶವನ್ನು ತಿಳಿಸಿದ್ದಾರೆ. ಸತ್ಯಾಸತ್ಯತೆ ಗೊತ್ತಾದ ಬಳಿಕ ತನಿಖೆಯ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಸತ್ಯ ಗೊತ್ತಾದ ಬಳಿಕ ತನಿಖೆ ಅಗತ್ಯ ಇಲ್ಲ: ಭದ್ರಾ ಮೇಲ್ದಂಡೆ ಯೋಜನೆ ಭ್ರಷ್ಟಾಚಾರ ಆರೋಪ ಕುರಿತು ಬೊಮ್ಮಾಯಿ ಹೇಳಿಕೆ
ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಬೇಕೆಂಬ ವಿರೋಧ ಪಕ್ಷಗಳ ಆಗ್ರಹವನ್ನು ತಳ್ಳಿಹಾಕಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳೇ ವಾಸ್ತವ ಅಂಶವನ್ನು ತಿಳಿಸಿದ್ದಾರೆ. ಸತ್ಯಾಸತ್ಯತೆ ಗೊತ್ತಾದ ಬಳಿಕ ತನಿಖೆಯ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಟೆಂಡರ್‌ಗೆ ಯಾವ ಪದ್ಧತಿಗಳನ್ನು ಅನುಸರಿಸಲಾಗುತ್ತಿತ್ತೋ ಈಗಲೂ ಅದೇ ಪ್ರಕಾರ ನಡೆಯುತ್ತಿದೆ. ಕೆಟಿಟಿಪಿ ಕಾಯ್ದೆ ಪ್ರಕಾರವೇ ಟೆಂಡರ್ ಪ್ರಕ್ರಿಯೆ ನಡೆದಿದೆ. ಎಲ್ಲವೂ ಪಾರದರ್ಶಕವಾಗಿದೆ. ವಿರೋಧ ಪಕ್ಷಗಳು ಆರೋಪ ಮಾಡುವುದು ಸಹಜ ಎಂದು ತಿರುಗೇಟು ನೀಡಿದ್ದಾರೆ.

ಇದೇ ವೇಳೆ ಅರವಿಂದ ಬೆಲ್ಲದ್ ಅವರ ದೂರವಾಣಿ ಕದ್ದಾಲಿಕೆ ಆರೋಪ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ‘ದೂರವಾಣಿ ಕರೆ ಕದ್ದಾಲಿಕೆ ಆಗುತ್ತಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಆರೋಪ ಮಾಡಿದ್ದು, ಪ್ರಕರಣವನ್ನು ತನಿಖೆಗೆ ವಹಿಸಲಾಗಿದೆ. ಬೆಲ್ಲದ್ ಜೊತೆ ತನಿಖಾಧಿಕಾರಿ ಚರ್ಚಿಸಿ ಮಾಹಿತಿ ಪಡೆದಿದ್ದಾರೆ’ ಎಂದು ತಿಳಿಸಿದ್ದಾರೆ.

ಭದ್ರಾ ಮೇಲ್ಡಂಡೆ ಯೋಜನೆಯ ಕಾಮಗಾರಿಯ ಟೆಂಡರ್‌ನಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಎಚ್‌. ವಿಶ್ವನಾಥ್‌ ಆರೋಪಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಆಗ್ರಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.