ರಾಜ್ಯ

ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನು ಗುರ್ತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ.

ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ
ಯಡಿಯೂರಪ್ಪ
Published On :

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನು ಗುರ್ತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ. 

ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಪ್ರವಾಹ ಎದುರಾಗಬಹುದಾದ ಪ್ರದೇಶಗಳ 20 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ನಡೆಸಿ ಪ್ರವಾಹ ಪರಿಸ್ಥಿತಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಿದರು. 

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿರುವ ರಾಜ್ಯ ಪ್ರವಾಹ ನಿರ್ಹವಣಾ ಕ್ರಿಯಾ ಯೋಜನೆ 2021ರಲ್ಲಿ 20 ಜಿಲ್ಲೆಗಳಲ್ಲಿ ಸುಮಾರು 1710 ಗ್ರಾಮಗಳನ್ನು ಪ್ರವಾಹ ಪೀಡಿತ ಗ್ರಾಮಗಳೆಂದು ಗುರ್ತಿಸಲಾಗಿದೆ. ಆ ಗ್ರಾಮಗಳ ಜನರ ಮನವೊಲಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿ. ಜನ-ಜಾನುವಾರು ರಕ್ಷಣೆಗೆ ಆದ್ಯತೆ ನೀಡಿ. ಸ್ಥಳಾಂತರಕ್ಕೆ ಹಿಂದೇಟು ಹಾಕುತ್ತಿರುವ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. 

ಸ್ಥಳಾಂತರ ಪ್ರದೇಶದಲ್ಲಿ ಅಗತ್ಯ ಎಲ್ಲಾ ಮೂಲಸೌಕರ್ಯ ಕಲ್ಪಿಸಲು ಕ್ರಮ ವಹಿಸಿ. ಇದಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದ ವಿಪತ್ತು ನಿರ್ವಹಣೆ ಕ್ರಿಯಾ ಯೋಜನೆ ಅಭಿವೃದ್ಧಿಪಡಿಸಿದ್ದು, ಅನುಷ್ಠಾನಗೊಳಿಸಲು ತರಬೇತಿ ನೀಡಲಾಗಿದೆ. ಕೋವಿಡ್ ಸೋಂಕು ತಡೆಗೂ ಗಮನ ಹರಿಸಿ. ಒಟ್ಟಿನಲ್ಲಿ ಪ್ರವಾಹ ಬಂದಾಗ ಕಾರ್ಯೋನ್ಮುಖರಾಗದೆ ಈಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.