ಲಸಿಕೆ ಅಭಿಯಾನದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಎರಡನೇ ಸ್ಥಾನ: ಡಾ. ಕೆ.ಸುಧಾಕರ್
ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನದಲ್ಲಿ ನಮ್ಮ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನದಲ್ಲಿ ನಮ್ಮ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಚಿವರು, ಇಂದು ಒಂದೇ ದಿನದಲ್ಲಿ 78 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಕರ್ನಾಟಕದಲ್ಲಿ 10 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದಿದ್ದಾರೆ.
ರಾಜ್ಯದಲ್ಲಿ ಈವರೆಗೂ ಒಟ್ಟಾರೇ,1.96 ಕೋಟಿ ಲಸಿಕೆ ನೀಡಲಾಗಿದೆ ಎಂದು ಡಾ. ಸುಧಾಕರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


