ಕೊರೋನಾ ಇಳಿಮುಖ: ತೆಲಂಗಾಣ, ಆಂಧ್ರಪ್ರದೇಶಕ್ಕೆ ಕೆಎಸ್ಆರ್'ಟಿಸಿಯಿಂದ ಬಸ್ ಸೇವೆ ಆರಂಭ
ಕರ್ನಾಟಕದ ಕೆಲವೊಂದು ಜಿಲ್ಲೆಗಳು ಈಗಾಗಲೇ ಅನ್ಲಾಕ್ ಆಗಿದ್ದು, ಜನಜೀವನ ಈ ಹಿಂದಿನಂತೆ ಪುನಾರಂಭಗೊಳ್ಳುತ್ತಿದೆ. ಇದರ ಮಧ್ಯೆಯೇ ಕರ್ನಾಟಕ ಸರ್ಕಾರ ಅಂತಾರಾಜ್ಯ ಸಾರಿಗೆ ಮತ್ತೆ ಪುನಾರಂಭ ಮಾಡಲು ಮುಂದಾಗಿದ್ದು, ಅದರ ಪ್ರಥಮ ಹೆಜ್ಜೆಯಾಗಿ ಪಕ್ಕದ ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶಕ್ಕೆ ಬಸ್ ಸೇವೆ ಮರು ಆರಂಭ ಮಾಡಿದೆ.

ಬೆಂಗಳೂರು: ಕರ್ನಾಟಕದ ಕೆಲವೊಂದು ಜಿಲ್ಲೆಗಳು ಈಗಾಗಲೇ ಅನ್ಲಾಕ್ ಆಗಿದ್ದು, ಜನಜೀವನ ಈ ಹಿಂದಿನಂತೆ ಪುನಾರಂಭಗೊಳ್ಳುತ್ತಿದೆ. ಇದರ ಮಧ್ಯೆಯೇ ಕರ್ನಾಟಕ ಸರ್ಕಾರ ಅಂತಾರಾಜ್ಯ ಸಾರಿಗೆ ಮತ್ತೆ ಪುನಾರಂಭ ಮಾಡಲು ಮುಂದಾಗಿದ್ದು, ಅದರ ಪ್ರಥಮ ಹೆಜ್ಜೆಯಾಗಿ ಪಕ್ಕದ ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶಕ್ಕೆ ಬಸ್ ಸೇವೆ ಮರು ಆರಂಭ ಮಾಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಈ ಮಹತ್ವದ ನಿರ್ಧಾರ ಹೊರಡಿಸಿದ್ದು, ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ಕೋವಿಡ್ ಮಾರ್ಗಸೂಚಿ ನಿಯಮದೊಂದಿಗೆ ಬಸ್ ಸೇವೆ ನಾಳೆಯಿಂದ ಆರಂಭಗೊಳ್ಳಿಸುತ್ತಿದೆ. ಬಸ್ನಲ್ಲಿ ಶೇ 50ರಷ್ಟು ಆಸನ ಭರ್ತಿಗೆ ಸೂಚನೆ ನೀಡಲಾಗಿದೆ. ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಮಾತ್ರ ಸೇವೆ ಲಭ್ಯವಿರಲಿದೆ. ಬಸ್ನಲ್ಲಿ ಪ್ರಯಾಣ ಮಾಡುವವರು ಕೋವಿಡ್ ನಿಯಮ ಪಾಲನೆ ಮಾಡುವುದು ಕಡ್ಡಾಯವಾಗಿದೆ.
ತೆಲಂಗಾಣದಲ್ಲಿ ಈಗಾಗಲೇ ಕೋವಿಡ್ ಲಾಕ್ಡೌನ್ ಸಂಪೂರ್ಣವಾಗಿ ತೆರವು ಮಾಡಲಾಗಿದ್ದು, ಎಲ್ಲಾ ಸೇವೆಗಳು ಆರಂಭಗೊಂಡಿವೆ. ಜತೆಗೆ ಅಂತಾರಾಜ್ಯ ಬಸ್ ಸೇವೆಗೂ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಇಂದಿನಿಂದ ಸಂಚಾರ ಸೇವೆ ಪುನಾರಂಭವಾಗಿದೆ.
ತೆಲಂಗಾಣದಿಂದ ಆಂಧ್ರಕ್ಕೆ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಬಸ್ ಸೇವೆ ಇರಲಿದೆ. ಇತ್ತ ಕರ್ನಾಟಕಕ್ಕೂ ಬಸ್ ಸೇವೆ ಆರಂಭಗೊಂಡಿದ್ದು, ಕರ್ನಾಟಕ ಕೋವಿಡ್ ನಿಯಮದ ಅನುಸಾರವಾಗಿ ಬೆಂಗಳೂರು ನಗರ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಇಂದಿನಿಂದಲೇ ಟಿಎಸ್ಆರ್ಟಿಸಿ ಬಸ್ ಸಂಚಾರ ಪುನಾರಂಭವಾಗಿದೆ. ಬೆಳಗ್ಗೆ 5 ಗಂಟೆಯಿಂದ ಸಂಜೆ 7ರ ವರೆಗೆ ಬಸ್ಗಳು ಸಂಚರಿಸಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


